ರಾಜ್ಯ

ಮರಕ್ಕೆ ಕಟ್ಟಿ ಮಹಿಳೆಗೆ ಥಳಿತ ಪ್ರಕರಣ: ತನಿಖೆಗೆ ರಾಜ್ಯ ಸರ್ಕಾರ ಆದೇಶ; ಕಾನೂನು ಕೈಗೆತ್ತಿಕೊಳ್ಳುವುದು ಸಹಿಸಲ್ಲ ಎಂದ ಸಿಎಂ

ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು.

ಮರಕ್ಕೆ ಕಟ್ಟಿ ಮಹಿಳೆಗೆ ಥಳಿತ ಪ್ರಕರಣ: ತನಿಖೆಗೆ ರಾಜ್ಯ ಸರ್ಕಾರ ಆದೇಶ; ಕಾನೂನು ಕೈಗೆತ್ತಿಕೊಳ್ಳುವುದು ಸಹಿಸಲ್ಲ  ಎಂದ ಸಿಎಂ
ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಮಹಿಳೆಯ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧ. ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ. ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ ಎಂದು ಹೇಳಿದ್ದಾರೆ.

ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ, ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ. ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.