ರಾಜ್ಯ

ವಿಧಾನಸಭೆ ಗದ್ದಲ, ಸ್ಪೀಕರ್‌ಗೆ 'ಅಗೌರವ': 6 ತಿಂಗಳ ಕಾಲ 18 BJP ಶಾಸಕರು ಅಮಾನತು; ಯುಟಿ ಖಾದರ್ ಆದೇಶ

ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿದ್ದಾರೆ.

ವಿಧಾನಸಭೆ ಗದ್ದಲ, ಸ್ಪೀಕರ್‌ಗೆ 'ಅಗೌರವ': 6 ತಿಂಗಳ ಕಾಲ 18 BJP ಶಾಸಕರು ಅಮಾನತು; ಯುಟಿ ಖಾದರ್ ಆದೇಶ
ವಿಧಾನಸಭೆ ದೃಶ್ಯಗಳು
Published On :

ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿದ್ದಾರೆ.

ಬಿಜೆಪಿ ಶಾಸಕರಾದ ಭೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರತ್ನ, ಬಿಪಿ ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ರಾಮಮೂರ್ತಿ, ದೊಡ್ಡನಗೌಡ ಪಾಟೀಲ್, ಡಾ. ಅಶ್ವತ್ಥ್ ನಾರಾಯಣ, ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗರ, ಚನ್ನಬಸಪ್ಪ, ಬಸವರಾಜ ಮತ್ತಿಮೂಡ, ಎಸ್ಆರ್ ವಿಶ್ವನಾಥ್ ಅವರನ್ನು ಮಾರ್ಷಲ್ ಗಳು ಕಲಾಪದಿಂದ ಹೊರಗೆ ತಂದು ಬಿಟ್ಟಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ ಕಲಾಪದಲ್ಲಿ ಶುಕ್ರವಾರ ಹೈಡ್ರಾಮಾಕ್ಕೆ ಕಾರಣವಾಯಿತು. ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾಯಿತು. ಇದೇ ವೇಳೆ ಬಿಜೆಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ, ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕರ್ ಮೇಲೆ ಎಸೆಯುತ್ತಾ, 'ಹನಿಟ್ರ್ಯಾಪ್ ಸರ್ಕಾರ' ಎಂದು ಘೋಷಣೆಗಳನ್ನು ಕೂಗಿದರು. ಇದೇ ವೇಳೆ ಸ್ಪೀಕರ್ ಸಹ ಶಾಸಕರು ತಾಳ್ಮೆ ವಹಿಸುವಂತೆ, ಕಲಾಪಕ್ಕೆ ಅಡ್ಡಿಪಡಿಸದಂತೆ ಮನವಿ ಮಾಡಿದರು. ಶಾಸಕರು ಪ್ರತಿಭಟನೆಯನ್ನು ಮುಂದುವರೆಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.