ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಎರಡು ತಿಂಗಳ ಗೃಹಲಕ್ಷ್ಮಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ರೂ.2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ.

ಬೆಳಗಾವಿ: ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ ಗೃಹಲಕ್ಷ್ಮಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ರೂ.2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ರೂ.1,000, ಸಹಾಯಕಿಯರ ಗೌರವಧನವನ್ನು ರೂ.750 ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ ತರುತ್ತೇವೆಂದು ಹೇಳಿದರು.
ಹನಿಟ್ರ್ಯಾಪ್ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿರುವುದು ದುರಾದೃಷ್ಟಕರ ಸಂಗತಿ. ಈ ಬಗ್ಗೆ ರಾಜಣ್ಣ ಅವರು ತಮಗಾದ ಅನುಭವವನ್ನು ಸದನದಲ್ಲಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಈಗಾಗಲೇ ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಆ ವಿಷಯ ನೋಡಿಕೊಳ್ಳುತ್ತಾರೆ. ಆ ಬಗ್ಗೆ ಹೆಚ್ಚು ಮಾತನಾಡಲ್ಲ’ ಎಂದು ತಿಳಿಸಿದರು.
‘ಘರ್ಜಿಸುವ ಹುಲಿಗಳನ್ನೇ ಈಗ ಗುರಿ ಮಾಡಿ ಹೆದರಿಸಲಾಗುತ್ತಿದೆ’ ಎಂಬ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆಗೆ, ಈ ಬಗ್ಗೆ ಸತೀಶ ಅವರನ್ನೇ ಕೇಳಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



