ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ದಿಢೀರ್ ರಾಜಿನಾಮೆ?
ವಿಧಾನ ಪರಿಷತ್ತಿನಲ್ಲಿ ಸದಸ್ಯರ ವರ್ತನೆಯು ಸರಿಯಿಲ್ಲ. ಹೀಗಾಗಿ ನಾನು ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತೇನೆ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ದೊಡ್ಡ ಕೋಲಾಹಲ ಸೃಷ್ಟಿಸಿದೆ. ಈ ಮಧ್ಯೆ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದ್ದು ಬಸವರಾಜ್ ಹೊರಟ್ಟಿ ಅವರು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ವರದಿಯಾಗಿತ್ತು. ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ಬಸವರಾಜ್ ಹೊರಟ್ಟಿ ಅವರು ತಮ್ಮ ರಾಜಿನಾಮೆ ಪತ್ರವನ್ನು ರವಾನಿಸಿದ್ದು ಮೇ 1ರೊಳಗೆ ತಮ್ಮ ರಾಜೀನಾಮೆಯನ್ನು ಅಂಗೀಕರಿಸಿ ಸಭಾಪತಿ ಹುದ್ದೆಯಿಂದ ಮುಕ್ತಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಸದಸ್ಯರ ವರ್ತನೆಯು ಸರಿಯಿಲ್ಲ. ಹೀಗಾಗಿ ನಾನು ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಬಸವರಾಜ ಹೊರಟ್ಟಿ ಇಂದು ಬೆಳಗ್ಗೆ ಅಷ್ಟೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅವರು ರಾಜೀನಾಮೆ ಪತ್ರವನ್ನು ಉಪಸಭಾಪತಿಗೆ ರವಾನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



