ಹನಿಟ್ರ್ಯಾಪ್ ಪ್ರಕರಣ: ರಾಜಣ್ಣ ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ; ಸಚಿವ ಪರಮೇಶ್ವರ್ ಭರವಸೆ
ರಾಜಣ್ಣ ದೂರು ಕೊಡೋದಾಗಿ ಹೇಳಿದ್ದಾರೆ, ಇನ್ನೂ ಕೊಟ್ಟಿಲ್ಲ. ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. ಯಾವ ತನಿಖೆಗೆ ಕೊಡಬೇಕು ಎಂಬುದರ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು.

ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್ ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಭಾನುವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಣ್ಣ ದೂರು ಕೊಡೋದಾಗಿ ಹೇಳಿದ್ದಾರೆ, ಇನ್ನೂ ಕೊಟ್ಟಿಲ್ಲ. ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. ಯಾವ ತನಿಖೆಗೆ ಕೊಡಬೇಕು ಎಂಬುದರ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಈಗಾಗಲೇ ಯಾವ ತನಿಖೆಗೆ ಕೊಡಬೇಕು ಎಂದು ಪ್ರಾಥಮಿಕವಾಗಿ ಚಿಂತನೆಗಳು ನಡೆದಿವೆ, ಸಿಎಂ ಜೊತೆಗೆ ಚರ್ಚೆ ಮಾಡಿದ ಬಳಿಕ ನಿರ್ಧಾರ ಪ್ರಕಟಿಸುತ್ತೇವೆಂದು ತಿಳಿಸಿದರು.
ಹನಿ ಟ್ರ್ಯಾಪ್ ಪ್ರಕರಣದಲ್ಲಿ ದೊಡ್ಡ ಆರೋಪ ಕೇಳಿ ಬಂದಿದೆ. ಹೀಗಾಗಿ ಗಂಭೀರವಾಗಿ ತಗೊಳ್ಳಲೇಬೇಕಿದೆ. ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ರಾಜಣ್ಣ ಅವರು ಇಷ್ಟೊತ್ತಿಗೆ ದೂರು ಕೊಟ್ಟಿದ್ದರೆ ಯಾವ ಸ್ವರೂಪದ ತನಿಖೆ ಅಂತ ಘೋಷಣೆ ಮಾಡುತ್ತಿದ್ದೆವು ಎಂದು ಹೇಳಿದ್ದಾರೆ.
ಸಿಬಿಐ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ ಎಂಬ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯಿಸಿ, ನಾವು ನಮ್ಮದೇ ರೀತಿಯಲ್ಲಿ ಪರಿಶೀಲಿಸಿ ನಿರ್ಧಾರ ಮಾಡುತ್ತೇವೆ. ಇಷ್ಟು ದೊಡ್ಡ ಘಟನೆ ನಡೆದಿದೆ, ವಿಧಾನಸೌಧದಲ್ಲಿ ಚರ್ಚೆ ಆಗಿದೆ. ನಡೆಯದಿರೋದೆಲ್ಲ ನಡೆದಿದೆ, ಅಂತಹದ್ದಲ್ಲಿ ಗಂಭೀರವಾಗಿ ತಗೊಳ್ಳಲಿಲ್ಲ ಎಂದರೆ ಆಗುವುದಿಲ್ಲ ಎಂದರು.
ಸದನದಲ್ಲಿ ಏಕಾಏಕಿ ರಾಜಣ್ಣ ಮಾತಾಡಿದ್ದಕ್ಕೆ ಹೈಕಮಾಂಡ್ ಬೇಸರವಾಗಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿ, ಇದು ಗೊತ್ತಿಲ್ಲ, ಇದರ ಬಗ್ಗೆ ಅಧ್ಯಕ್ಷರು ನೋಡ್ಕೋತಾರೆ ಎಂದು ಹೇಳಿದ್ದಾರೆ.
ರಾಜಣ್ಣ ಅವರ ಮೇಲೆ ದೂರು ಕೊಡದಂತೆ ಒತ್ತಡ ಇದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದರ ಬಗ್ಗೆ ನನ್ನ ಜೊತೆ ಯಾರೂ ಮಾತಾಡಿಲ್ಲ, ಹೈಕಮಾಂಡ್‌ನವರೂ ಮಾತಾಡಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



