ಶಾಸಕ ಉದಯ ಗರುಡಾಚಾರ್ ಗೆ ಪಿತೃ ವಿಯೋಗ: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್ ಗರುಡಾಚಾರ್ ನಿಧನ
ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗನವಿಲೆ ಗ್ರಾಮದ ಗರುಡಾಚಾರ್ ಅವರು ಪೊಲೀಸ್ ಇಲಾಖೆಯಲ್ಲಿ ವಿವಿಧ ಹಂತದ ಅಧಿಕಾರಿಯಾಗಿ ಕೆಲಸ ಮಾಡಿದ್ದರು.

ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್(97) ಅವರು ಶುಕ್ರವಾರ ಮುಂಜಾನೆ ನಿಧನರಾದರು. ಮೃತರಿಗೆ ಶಾಸಕ ಉದಯ್ ಗರುಡಾಚಾರ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗನವಿಲೆ ಗ್ರಾಮದ ಗರುಡಾಚಾರ್ ಅವರು ಪೊಲೀಸ್ ಇಲಾಖೆಯಲ್ಲಿ ವಿವಿಧ ಹಂತದ ಅಧಿಕಾರಿಯಾಗಿ ಕೆಲಸ ಮಾಡಿದ್ದರು.
ಐಪಿಎಸ್ ಅಧಿಕಾರಿಯಾಗಿದ್ದ ಗರುಡಾಚಾರ್ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ (ಕೆಎಟಿ) ಸದಸ್ಯರಾಗಿಯೂ ಕೆಲಸ ಮಾಡಿದ್ದರು. ಮೃತರ ಅಂತಿಮ ಸಂಸ್ಕಾರವು ವಿಲ್ಸನ್ ಗಾರ್ಡನ್‌ನ ವಿದ್ಯುತ್ ಚಿತಾಗಾರದಲ್ಲಿ ಶನಿವಾರ ಸಂಜೆ ನಾಲ್ಕಕ್ಕೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಬಿ ಗರುಡಾಚಾರ್ ಅವರ ತಂದೆಯಾಗಿರುವ ಬಿ.ಎನ್.ಗರುಡಾಚಾರ್ ಅವರು ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಂಗಳೂರು ಮಹಾನಗರ ಡಿಸಿಪಿ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು. ನಂತರ ಡಿಜಿ-ಐಜಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



