ರಾಜ್ಯ

ಕೊಪ್ಪಳ: ಇನ್ಮುಂದೆ ಶೀಘ್ರದಲ್ಲೇ ಆಗಲಿದೆ ಅಂಜನಾದ್ರಿ ಹನುಮನ ದರ್ಶನ; ರೋಪ್ ವೇ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್

ರಾಮಾಯಣದ ಮಹಾಕಾವ್ಯದಲ್ಲಿ ಉಲ್ಲೇಖಿಸಿರುವ ಪ್ರಕಾರ, ಅಂಜನಾದ್ರಿ ಬೆಟ್ಟವನ್ನು ಹನುಮಂತನ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ.

ಕೊಪ್ಪಳ: ಇನ್ಮುಂದೆ ಶೀಘ್ರದಲ್ಲೇ ಆಗಲಿದೆ ಅಂಜನಾದ್ರಿ ಹನುಮನ ದರ್ಶನ; ರೋಪ್ ವೇ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್
ಅಂಜನಾದ್ರಿ ಬೆಟ್ಟ
Published On :

ಕೊಪ್ಪಳ: ರಾಮಾಯಣದ ಮಹಾಕಾವ್ಯದಲ್ಲಿ ಉಲ್ಲೇಖಿಸಿರುವ ಪ್ರಕಾರ, ಅಂಜನಾದ್ರಿ ಬೆಟ್ಟವನ್ನು ಹನುಮಂತನ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ. ಹೀಗಾಗಿ ಬೆಟ್ಟದ ಮೇಲಿರುವ ಆಂಜನೇಯನ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆದರೆ ಆಂಜನೇಯನ ದರ್ಶನ ಪಡೆಯಬೇಕಾದರೆ, ಬೆಟ್ಟದಲ್ಲಿರುವ 575 ಮೆಟ್ಟಿಲುಗಳನ್ನು ಹತ್ತಲೇಬೇಕು. ಆದರೆ ವೃದ್ದರು, ಅನಾರೋಗ್ಯ ಪೀಡಿತರು ಬೆಟ್ಟ ಹತ್ತಿ ದರ್ಶನ ಪಡೆಯೋದು ಕಷ್ಟಸಾಧ್ಯವಾಗಿದೆ. ಹೀಗಾಗಿ ಬೆಟ್ಟಕ್ಕೆ ರೂಪ್ ವೇ ನಿರ್ಮಿಸುವಂತೆ ಹಲವು ವರ್ಷಗಳಿಂದ ಒತ್ತಾಯಗಳು ಕೇಳಿಬರುತ್ತಿವೆ. ಆ ಬೇಡಿಕೆ ಈಡೇರುವ ಕಾಲ ಸನಿಹಿತವಾಗಿದೆ. ಹೌದು... ರೋಪ್ ವೇ ನಿರ್ಮಾಣಕ್ಕೆ ಅನುಮೋಧನೆ ಸಿಕ್ಕಿದೆ.

ಗಂಗಾವತಿ ತಾಲೂಕಿನ ಆನೆಗೊಂದಿ ಬಳಿ ಇರುವ ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಿಸುವುದಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹೇಳುತ್ತಿದ್ದರು. ಆದರೆ ನಿರ್ಮಾಣ ಕಾರ್ಯ ಶುರುವಾಗಿರಲಿಲ್ಲ. ಆದರೆ ಈಗ ಅಂದುಕೊಂಡಂತೆ ಆದರೆ ಅಂಜನಾದ್ರಿ ಬೆಟ್ಟಕ್ಕೆ ಮೂರು ರೋಪ್ ವೇ ನಿರ್ಮಾಣದ ಪ್ಲ್ಯಾನ್ ರೆಡಿಯಾಗುತ್ತಿದೆ. ಮೊದಲ ಹಂತದಲ್ಲಿ ಒಂದು ರೋಪ್ ವೇ ನಿರ್ಮಾಣಕ್ಕೆ ಸಿದ್ದತೆ ನಡೆದಿದೆ. ಮೂರು ಕಿಲೋ ಮೀಟರ ರೋಪ್ ವೇಯನ್ನು 120 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆಯಂತೆ. ಈ ರೋಪ್ ವೇ ನಿರ್ಮಾಣವಾದರೆ ಹಂಪಿ ವಿರುಪಾಕ್ಷೇಶ್ವರ ದೇವಸ್ಥಾನದಿಂದ ನೇರವಾಗಿ ಅಂಜನಾದ್ರಿಗೆ ರೋಪ್ ವೇ ನಿರ್ಮಾಣವಾಗಲಿದೆ. 450 ಮೀ. ಉದ್ದದ ರೋಪ್ ವೇ ನಿರ್ಮಾಣವಾದರೆ ಒಂದು ಗಂಟೆಯಲ್ಲಿ 800 ಭಕ್ತಾಧಿಗಳನ್ನು ಅಂಜನಾದ್ರಿ ಬೆಟ್ಟದ ಮೇಲೆ ತಲುಪಿಸಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.