ಒಂದನೇ ತರಗತಿ ಶಾಲಾ ಪ್ರವೇಶ ವಯೋಮಿತಿ: SEP ಆಯೋಗದಿಂದ ನಿರ್ಧಾರ- ಮಧು ಬಂಗಾರಪ್ಪ
ಇದು ಹಿಂದಿನ ಸರ್ಕಾರ ಮಾಡಿದ ತಪ್ಪಾಗಿದೆ. ಅವರು ರಾಷ್ಟ್ರೀಯ ಶಿಕ್ಷಣ ನೀತಿ ಮಾರ್ಗಸೂಚಿ ರೂಪಿಸಿದ್ದಾರೆ. ನಾವು ಅದರ ವಿರುದ್ಧವಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ರಾಜ್ಯ ಶಿಕ್ಷಣ ನೀತಿ ಆಯೋಗಕ್ಕೆ ಮನವಿ ಮಾಡಿದ್ದೇವೆ.

ಬೆಂಗಳೂರು: ಒಂದನೇ ತರಗತಿ ಶಾಲಾ ಪ್ರವೇಶ ವಯೋಮಿತಿಯನ್ನು ರಾಜ್ಯ ಶಿಕ್ಷಣ ನೀತಿ (SEP)ಆಯೋಗದ ಶಿಫಾರಸಿನಂತೆ ನಿಗದಿಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ.
1ನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ವಯೋಮಿತಿ ಸಡಿಲಿಕೆ ನೀಡುವಂತೆ ಹಲವು ಪೋಷಕರ ಮನವಿಯ ಹಿನ್ನೆಲೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಇದು ಹಿಂದಿನ ಸರ್ಕಾರ ಮಾಡಿದ ತಪ್ಪಾಗಿದೆ. ಅವರು ರಾಷ್ಟ್ರೀಯ ಶಿಕ್ಷಣ ನೀತಿ ಮಾರ್ಗಸೂಚಿ ರೂಪಿಸಿದ್ದಾರೆ. ನಾವು ಅದರ ವಿರುದ್ಧವಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ರಾಜ್ಯ ಶಿಕ್ಷಣ ನೀತಿ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು.
ಎಸ್‌ಇಪಿ ಆಯೋಗದಿಂದ ಇಲಾಖೆಯು ಮಾರ್ಗಸೂಚಿಗಳನ್ನು ಸ್ವೀಕರಿಸಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಈ ಸಮಸ್ಯೆ ಕುರಿತು ಚರ್ಚಿಸಿ ಅದನ್ನು ಕಾರ್ಯಗತಗೊಳಿಸುವುದಾಗಿ ಸಚಿವರು ಹೇಳಿದರು. ಈ ವಿಷಯದ ಬಗ್ಗೆ ಸಚಿವರೊಂದಿಗೆ ಮಾತನಾಡಲು ಪೋಷಕರ ಗುಂಪೊಂದು ಸಚಿವರ ನಿವಾಸದ ಬಳಿ ಹೈಡ್ರಾಮ ನಡೆಸಿತು.
ಮಾಧ್ಯಮದವರ ಜೊತೆಗೆ ಪೋಷಕರನ್ನು ಕಂಡ ಮಧು ಬಂಗಾರಪ್ಪ ಸಿಟ್ಟಿಗೆದ್ದು ನಾನ್ ಸೆನ್ಸ್ ಎಂದು ಕಿಡಿಕಾರಿದರು. 2022ರ ನವೆಂಬರ್ 15ರಂದು ಶಾಲಾ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಂತೆ ಮಕ್ಕಳಿಗೆ ಜೂನ್ 1, 2025 ರೊಳಗೆ ಆರು ವರ್ಷಗಳನ್ನು ಪೂರ್ಣಗೊಳಿಸಿದ ಮಕ್ಕಳು 2025-26 ಶೈಕ್ಷಣಿಕ ವರ್ಷಕ್ಕೆ 1 ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ
ಈ ಹಿಂದೆ 1ನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ ವಯಸ್ಸು 5.5 ವರ್ಷವಾಗಿತ್ತು. ಪೋಷಕರು ಮತ್ತು ಇತರ ಸಂಘಟನೆಗಳ ಪ್ರತಿಭಟನೆಯ ನಂತರ, ಇಲಾಖೆಯು ಮತ್ತೊಂದು ಸುತ್ತೋಲೆಯನ್ನು ಹೊರಡಿಸಿದ್ದು, ನವೆಂಬರ್ 2022 ರ ಆದೇಶವನ್ನು 2025-26 ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುವುದು ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



