ರಾಜ್ಯ

ಯುಗಾದಿ ಹಬ್ಬದ ದಿನವೇ ದುರಂತ: ಈಜಲು ತೆರಳಿದ್ದ ಮೂವರು ಬಾಲಕರು ಕೃಷ್ಣಾ ನದಿಯಲ್ಲಿ ಮುಳುಗಿ ಸಾವು

ಮೃತ ಬಾಲಕರನ್ನು ಸೋಮಶೇಖರ್ ದೇವರಮನಿ (17), ಪರನಗೌಡ ಬೀಳಗಿ (15) ಹಾಗೂ ಮಲ್ಲಪ್ಪ ಬಗಲಿ (16) ಎಂದು ಗುರುತಿಸಲಾಗಿದೆ.

ಯುಗಾದಿ ಹಬ್ಬದ ದಿನವೇ ದುರಂತ: ಈಜಲು ತೆರಳಿದ್ದ ಮೂವರು ಬಾಲಕರು ಕೃಷ್ಣಾ ನದಿಯಲ್ಲಿ ಮುಳುಗಿ  ಸಾವು
ಸಾಂದರ್ಭಿಕ ಚಿತ್ರ
Published On :

ಬಾಗಲಕೋಟೆ: ಯುಗಾದಿ ಹಬ್ಬದ ದಿನವೇ ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ಕೃಷ್ಣಾ ನದಿಯಲ್ಲಿ ಮುಳುಗಿ ಮೂವರು ಬಾಲಕರು ಮೃತಪಟ್ಟ ಘಟನೆ ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿ ನಡೆದಿದೆ.

ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಬಾಲಕರು ನೀರುಪಾಲಾಗಿದ್ದಾರೆ. ಮೃತ ಬಾಲಕರನ್ನು ಸೋಮಶೇಖರ್ ದೇವರಮನಿ (17), ಪರನಗೌಡ ಬೀಳಗಿ (15) ಹಾಗೂ ಮಲ್ಲಪ್ಪ ಬಗಲಿ (16) ಎಂದು ಗುರುತಿಸಲಾಗಿದೆ.

ಮೂವರ ಪೈಕಿ ಬಾಲಕ ಸೋಮಶೇಖರ್ ಮೃತದೇಹ ಪತ್ತೆಯಾಗಿದೆ. ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆಯುತ್ತಿದೆ. ಬಾಲಕರು ಬಾಗಲಕೋಟೆ ತಾಲೂಕಿನ ಇಲ್ಯಾಳ ನಿವಾಸಿಗಳು ಎಂದು ತಿಳಿದುಬಂದಿದೆ. ಬಾಗಲಕೋಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.