ರಾಜ್ಯ

ಹುಬ್ಬಳ್ಳಿ: ಮಾರ್ಗಮಧ್ಯೆ KSRTC ಬಸ್ ನಿಲ್ಲಿಸಿ ನಮಾಜ್; ಚಾಲಕ ಎಆರ್ ಮುಲ್ಲಾ ಅಮಾನತು, Video

ಪ್ರಯಾಣಿಕರು ಇರುವಾಗಲೇ KSRTC ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಬಸ್ ನಲ್ಲೇ ನಮಾಜ್ ಮಾಡಿದ್ದ ಚಾಲಕನನ್ನು ಅಮಾನತು ಮಾಡಲಾಗಿದೆ. ಏಪ್ರಿಲ್ 29ರಂದು ಹುಬ್ಬಳ್ಳಿಯಿಂದ ಹಾವೇರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿತ್ತು.

ಹುಬ್ಬಳ್ಳಿ: ಮಾರ್ಗಮಧ್ಯೆ KSRTC ಬಸ್ ನಿಲ್ಲಿಸಿ ನಮಾಜ್; ಚಾಲಕ ಎಆರ್ ಮುಲ್ಲಾ ಅಮಾನತು, Video
Published On :

ಹುಬ್ಬಳ್ಳಿ: ಪ್ರಯಾಣಿಕರು ಇರುವಾಗಲೇ KSRTC ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಬಸ್ ನಲ್ಲೇ ನಮಾಜ್ ಮಾಡಿದ್ದ ಚಾಲಕನನ್ನು ಅಮಾನತು ಮಾಡಲಾಗಿದೆ. ಏಪ್ರಿಲ್ 29ರಂದು ಹುಬ್ಬಳ್ಳಿಯಿಂದ ಹಾವೇರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಬಸ್ ಚಾಲಕ ಕಮ್ ನಿರ್ವಾಹಕ ಎಆರ್ ಮುಲ್ಲಾ ಬಸ್ ನಲ್ಲೇ ನಮಾಜ್ ಮಾಡುತ್ತಿರುವ ವಿಡಿಯೊವನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಚಿತ್ರಿಸಿ ಸಾಮಾಜಿಕ ಜಲಾತಾಣಗಳಲ್ಲಿ ಹರಿಬಿಟ್ಟಿದ್ದರು.

ಈ ವಿಡಿಯೋ ವ್ಯಾಪಕ ವೈರಲ್ ಆಗಿದ್ದು ಚಾಲಕನ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಚಾಲಕನ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದರು. ಈ ಘಟನೆ ನಂತರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ತನಿಖೆಗೆ ಆದೇಶಿಸಿದ್ದರು. ಇದೀಗ ಹಾನಗಲ್ KSRTC ಘಟಕದ ಚಾಲಕ ಎಆರ್ ಮುಲ್ಲಾನನ್ನು ಕರ್ತವ್ಯಲೋಪ ಅಡಿಯಲ್ಲಿ ಕೆಲಸದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಏನಿದು ಪ್ರಕರಣ?

ಮಂಗಳವಾರ ಅಂದರೆ ಏಪ್ರಿಲ್ 29ರಂದು ಸಂಜೆ ಹುಬ್ಬಳ್ಳಿಯಿಂದ ಹಾವೇರಿಗೆ ಹೋಗುವ ಬಸ್​ನ ಚಾಲಕ-ಕಂ-ನಿರ್ವಾಹಕ ಎಆರ್ ಮುಲ್ಲಾ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದಾರೆ. ಚಾಲಕ-ಕಂ-ನಿರ್ವಾಹಕ ನಮಾಜ್​ ಮಾಡುತ್ತಿರುವುದನ್ನು ಪ್ರಯಾಣಿಕರೊಬ್ಬರು ಮೊಬೈಲ್​ ಕ್ಯಾಮೆರಾದಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಈ ವಿಡಿಯೋ ಸಾಕಷ್ಟು ವೈರಲ್​ ಆಗುತ್ತಿದ್ದಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ. ಅವರಿಗೆ ಪತ್ರ ಬರೆದು ತನಿಖೆಗೆ ಆದೇಶಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.