ರಾಜ್ಯ

ಚಿತ್ರದುರ್ಗದಲ್ಲಿ ಡಿವೈಡರ್ ಗೆ ಕಾರು ಡಿಕ್ಕಿ: ತಮಿಳುನಾಡಿನ ಮೂವರು ಸಾವು

ಅಪಘಾತ ನಡೆದ ಸ್ಥಳದಲ್ಲಿಯೇ ಓರ್ವ ಮೃತಪಟ್ಟಿದ್ದರೆ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ

ಚಿತ್ರದುರ್ಗದಲ್ಲಿ ಡಿವೈಡರ್ ಗೆ ಕಾರು ಡಿಕ್ಕಿ: ತಮಿಳುನಾಡಿನ ಮೂವರು ಸಾವು
ಅಪಘಾತಕ್ಕೀಡಾದ ಕಾರು
Published On :

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಾತ್ರಾಳ ಗ್ರಾಮದ ಕೆರೆ ಬಳಿ ಡಿವೈಡರ್​ಗೆ ಇನ್ನೋವಾ ಕಾರು ಡಿಕ್ಕಿ ಹೊಡೆದು ತಮಿಳುನಾಡು ಮೂಲದ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ಅರ್ಜುನ್(28 ವ), ಶರವಣ(31 ವ) ಮತ್ತು ಸೇಂದಿಲ್(29 ವ) ಮೃತಪಟ್ಟವರಾಗಿದ್ದಾರೆ.

ಅಪಘಾತ ನಡೆದ ಸ್ಥಳದಲ್ಲಿಯೇ ಓರ್ವ ಮೃತಪಟ್ಟಿದ್ದರೆ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. ಸದ್ಯ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಇನ್ನೂ ಹಲವು ದುರ್ಘಟನೆಗಳು ನಡೆದಿವೆ. ಮೊಬೈಲ್​ನಲ್ಲಿ ಮಾತನಾಡುತ್ತಾ ರೈಲ್ವೆ ಟ್ರ್ಯಾಕ್ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ಸ್ಥಳದಲ್ಲೇ ಯುವತಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಹರಿಹರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಬಳ್ಳಾರಿ ಮೂಲದ ಶ್ರಾವಣಿ (23 ವ) ಮೃತ ಯುವತಿಯಾಗಿದ್ದಾಳೆ. ಹರಿಹರ ನಗರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ಪಾದಚಾರಿ ಯುವಕನಿಗೆ ಟ್ರಾಕ್ಟರ್ ಡಿಕ್ಕಿಯಾಗಿ ಸ್ಥಳದಲ್ಲೇ ಅಸುನೀಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೊಂಡದಹಳ್ಳಿಯಲ್ಲಿ ನಡೆದಿದೆ. ಕೆ.ಪಿ.ಸ್ವಾಮೀ (18ವ) ಮೃತ ಯುವಕ. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.