Heavy rains in Bengaluru: ಕತ್ರಿಗುಪ್ಪೆಯಲ್ಲಿ ಮರ ಬಿದ್ದು ಆಟೋ ಚಾಲಕ ಸಾವು!
ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ಈ ಘಟನೆ ನಡೆದಿದ್ದು, ಭಾರಿ, ಗಾಳಿ ಮಳೆಗೆ ಆಟೋದ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರಿ ಮಳೆ ಸುರಿದಿದ್ದು, ಮರ ಬಿದ್ದು ಆಟೋ ಚಾಲಕ ಸಾವನ್ನಪ್ಪಿರುವ ಧಾರುಣ ಘಟನೆ ವರದಿಯಾಗಿದೆ.
ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ಈ ಘಟನೆ ನಡೆದಿದ್ದು, ಭಾರಿ, ಗಾಳಿ ಮಳೆಗೆ ಆಟೋದ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕತ್ರಿಗುಪ್ಪೆಯ ಎಂ.ಎಂ.ಬಾರ್ ಬಳಿ ಘಟನೆ ನಡೆದಿದ್ದು, ಮಳೆ ಮತ್ತು ಗಾಳಿಯಿಂದಾಗಿ ಬೃಹತ್ ಮರ ಉರುಳಿ ತುಂಡಾಗಿ ಆಟೋ ಮೇಲೆ ಬಿದ್ದಿದೆ. ಪರಿಣಾಮ ಆಟೋ ಚಾಲಕ ಮಹೇಶ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Heavy rains in Bengaluru: ಬೆಂಗಳೂರಿನಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ಥ; ಇನ್ನೂ 3 ದಿನ ವರ್ಷಧಾರೆ ಸಾಧ್ಯತೆ
ಅದೃಷ್ಟವಶಾತ್, ಆ ಸಂದರ್ಭದಲ್ಲಿ ಆಟೋದಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಿಕೆ ಅಚ್ಚುಕಟ್ಟು ಬಳಿಯ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಇಟ್ಟಮಡು ಮೂಲದ ಆಟೋ ಚಾಲಕ ಮಹೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂಜೆ 7:30ರ ಸುಮಾರಿಗೆ ಈ ಘಟನೆ ನಡೆದಿದೆ. ವಿಚಾರ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


