ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ; ನೋಡುವುದು ಹೇಗೆ?
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನಾಳೆ ಬೆಳಗ್ಗೆ 11:30ಕ್ಕೆ ಬೆಂಗಳೂರಿನ KSEAB ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ಶುಕ್ರವಾರ 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನಾಳೆ ಬೆಳಗ್ಗೆ 11:30ಕ್ಕೆ ಬೆಂಗಳೂರಿನ KSEAB ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.
ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.
KSEAB SSLC-1 ಫಲಿತಾಂಶ ನೋಡುವುದು ಹೇಗೆ?
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC ಅಥವಾ 10 ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://kseab.karnataka.gov.in ಅಥವಾ https://karresults.nic.in ನಲ್ಲಿ ಪ್ರಕಟಿಸಲಿದೆ.
karresults.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
SSLC Result 2025 ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ 2025 ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ.
ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
Submit ಬಟನ್ ಮೇಲೆ ಕ್ಲಿಕ್ ಮಾಡಿ
ನಿಮ್ಮ ಫಲಿತಾಂಶವನ್ನು ಸ್ಕ್ರೀನ್ ಮೇಲೆ ತೋರಿಸುತ್ತದೆ, ನಿಮ್ಮ ವಿಷಯವಾರು ಅಂಕಗಳು ಮತ್ತು ಒಟ್ಟಾರೆ ಕಾರ್ಯಕ್ಷಮತೆಯನ್ನು ಪ್ರದರ್ಶಿಸುತ್ತದೆ.
ಬಳಿಕ, ಫಲಿತಾಂಶ ಅಂಕಪಟ್ಟಿಯ ಪ್ರಿಂಟ್ ತೆಗೆದುಕೊಳ್ಳಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



