ಸುಹಾಸ್ ಶೆಟ್ಟಿ ಹತ್ಯೆ: ದಕ್ಷಿಣ ಕನ್ನಡ ಬಹುತೇಕ ಬಂದ್; ಬಸ್ಗಳ ಮೇಲೆ ಕಲ್ಲು ತೂರಾಟ
ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕೆಲವು ಸಾರ್ವಜನಿಕ ಸಾರಿಗೆ ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು: ರೌಡಿ ಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಎಚ್ಪಿ ನೀಡಿದ ಬಂದ್ ಕರೆ ಮತ್ತು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಶುಕ್ರವಾರ ಬಂದ್ ವಾತಾವರಣವಿತ್ತು.
ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕೆಲವು ಸಾರ್ವಜನಿಕ ಸಾರಿಗೆ ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು ತಾಲ್ಲೂಕಿನ ಬಜ್ಪೆ ಬಳಿಯ ಕಿನ್ನಿಪದವಿನಲ್ಲಿ ಗುರುವಾರ ಸಂಜೆ ಹಿಂದೂ ಕಾರ್ಯಕರ್ತ ಮತ್ತು ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಮಾಡಲಾಗಿದ್ದು, ಇದನ್ನು ಖಂಡಿಸಿ ವಿಎಚ್ಪಿ ಇಂದು ಬಂದ್ಗೆ ಕರೆ ನೀಡಿತ್ತು.
ಹಂಪನಕಟ್ಟೆ, ಸೆಂಟ್ರಲ್ ಮಾರ್ಕೆಟ್, ಫಲ್ನೀರ್, ಬಲ್ಮಠ, ಕಂಕನಾಡಿ, ಉರ್ವಾ ಮತ್ತು ಅಳಕೆಯಂತಹ ಮಂಗಳೂರು ನಗರದ ಎಲ್ಲಾ ಅಪ್ಟೌನ್ ಪ್ರದೇಶಗಳಲ್ಲಿ ಅಂಗಡಿಗಳು ಬಂದ್ ಆಗಿದ್ದವು.
ಫರಂಗಿಪೇಟೆ, ಬಜ್ಪೆ, ಉಳ್ಳಾಲ, ಗುರುಪುರ, ಸುರತ್ಕಲ್, ಗಂಜಿಮಠ, ಕಿನ್ನಿಗೋಳಿ ಮತ್ತು ಮುಲ್ಕಿಯಂತಹ ಉಪನಗರ ಪ್ರದೇಶಗಳು ಸಹ ಸಂಪೂರ್ಣವಾಗಿ ಬಂದ್ ಆಗಿದ್ದವು.
ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ, ಅಂಗಡಿಗಳನ್ನು ಮುಚ್ಚುವಂತೆ ಪೊಲೀಸರು ಸೂಚಿಸಿದ್ದಾರೆ.
ಪಂಪ್ವೆಲ್ ಮತ್ತು ಕಂಕನಾಡಿ ಪ್ರದೇಶಗಳ ಬಳಿ ಕೆಲವು ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ಟಿಸಿ) ಉಪನಗರ ಪ್ರದೇಶಗಳಿಗೆ ಬಸ್ ಸೇವೆ ಸ್ಥಗಿತಗೊಳಿಸಿದೆ.
ಅಧಿಕಾರಿಗಳ ಪ್ರಕಾರ, ಮೂಲ್ಕಿ ಮತ್ತು ನಂತೂರು ಬಳಿ ಕೆಲವು ಖಾಸಗಿ ಬಸ್ಗಳ ಮೇಲೂ ಕಲ್ಲು ತೂರಾಟ ನಡೆಸಲಾಯಿತು, ನಂತರ ಅವುಗಳ ಸೇವೆ ಬಂದ್ ಸ್ಥಗಿತಗೊಳಿಸಲಾಗಿದೆ.
ಇಂದು ಬೆಳಗ್ಗೆ ಉಪನಗರ ಕೇಂದ್ರಗಳಿಂದ ಮಂಗಳೂರು ನಗರಕ್ಕೆ ಹೋಗುವ ದಾರಿಯಲ್ಲಿ ತಮ್ಮ ನಾಲ್ಕು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಕ ರಾಜೇಶ್ ಶೆಟ್ಟಿ ಅವರು ತಿಳಿಸಿದ್ದಾರೆ.
ಘಟನೆಯ ನಂತರ, ಪೊಲೀಸರು ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತದ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿಯೂ ಸೇವೆ ಸಲ್ಲಿಸುತ್ತಿರುವ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಸಾರ್ವಜನಿಕ ಸಭೆ, ಸಮಾರಂಭ, ಮೆರವಣಿಗೆಗಳು, ಘೋಷಣೆಗಳು ಮತ್ತು ಆಯುಧಗಳಾಗಿ ಬಳಸಬಹುದಾದ ವಸ್ತುಗಳನ್ನು ಸಾಗಿಸುವುದನ್ನು ನಿಷೇಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



