ಸುಹಾಸ್ ಶೆಟ್ಟಿ ಹತ್ಯೆ: ದಕ್ಷಿಣ ಕನ್ನಡಿಗರನ್ನು ಮತ್ತೆ ನೆನಪಿಸಿದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ
ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ತಲ್ವಾರ್ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೌಡಿಶೀಟರ್ ಸುಹಾಸ್ ಶೆಟ್ಟಿಯು ಸುರತ್ಕಲ್ನ ಫಾಜಿಲ್ ಕೊಲೆ ಕೇಸ್ನ ಪ್ರಮುಖ ಆರೋಪಿಯಾಗಿದ್ದರು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಕೊಲೆಯ ವಿಚಾರಕ್ಕೆ ಸುದ್ದಿಯಾಗಿದ್ದು, ಇಂದು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡವಾಗಿರುವುದರಿಂದ ಬಂದ್ ಗೆ ಕರೆ ನೀಡಲಾಗಿದೆ.
ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ತಲ್ವಾರ್ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೌಡಿಶೀಟರ್ ಸುಹಾಸ್ ಶೆಟ್ಟಿಯು ಸುರತ್ಕಲ್ನ ಫಾಜಿಲ್ ಕೊಲೆ ಕೇಸ್ನ ಪ್ರಮುಖ ಆರೋಪಿಯಾಗಿದ್ದರು.
ನಿನ್ನೆಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬುವವರನ್ನು ಜುಲೈ 26, 2022ರಂದು ಹತ್ಯೆ ಮಾಡಿದ ಘಟನೆಯನ್ನು ನೆನಪಿಸುತ್ತದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದು, ಪ್ರಕರಣ ವಿಚಾರಣೆ ಇನ್ನೂ ನಡೆಯುತ್ತಿದೆ.
ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2 ದಿನ ಬಳಿಕ ಜುಲೈ 28ರಂದು ಫಾಜಿಲ್ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದರು.
ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತನಾಗಿದ್ದರು. ಸಹಾಸ್ ಶೆಟ್ಟಿ ವಿರುದ್ಧ ಹಲವು ಕೊಲೆ, ಕೊಲೆಯತ್ನ ಕೇಸ್ಗಳು ದಾಖಲಾಗಿದ್ದವು. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮಂಗಳೂರು ಹಲವೆಡೆ ನಾಕಾಬಂದಿ ಹಾಕಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ಇಡೀ ಗಸ್ತು ತಿರುಗಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದು, ಮಂಗಳೂರು ನಗರಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.
ಫಾಜಿಲ್ ಕೊಲೆ ಪ್ರಕರಣ
2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಇದಕ್ಕೆ ಪ್ರತಿಕಾರವಾಗಿ 2022ರ ಜುಲೈ 28 ರಂದು ಸುರತ್ಕಲ್ನಲ್ಲಿ ಫಾಜಿಲ್ ಕೊಲೆಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



