ರಾಜ್ಯ

ಸುದ್ದಗುಂಟೆಪಾಳ್ಯ ಯುವತಿಗೆ ಕಿರುಕುಳ ಪ್ರಕರಣ; ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ FIR ದಾಖಲು

ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1 ನೇ ಕ್ರಾಸ್ ನಿವಾಸಿ ಲೋಕೇಶ್ ಗೌಡ (55) ವಿರುದ್ಧ ಸುದ್ದಗುಂಟೆಪಾಳ್ಯ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66e ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಗುಂಟೆಪಾಳ್ಯ ಯುವತಿಗೆ ಕಿರುಕುಳ ಪ್ರಕರಣ; ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ FIR ದಾಖಲು
ಸಿಸಿಟಿವಿ ದೃಶ್ಯ
Published On :

ಬೆಂಗಳೂರು: ಏಪ್ರಿಲ್ 3 ರಂದು ಸುದ್ದಗುಂಟೆಪಾಳ್ಯದಲ್ಲಿ ಯುವತಿ ಮೇಲೆ ನಡೆದಿದ್ದ ಲೈಂಗಿಕ ಕಿರುಕುಳದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1 ನೇ ಕ್ರಾಸ್ ನಿವಾಸಿ ಲೋಕೇಶ್ ಗೌಡ (55) ವಿರುದ್ಧ ಸುದ್ದಗುಂಟೆಪಾಳ್ಯ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66e ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ,

ತಾವರೆಕೆರೆ ಮುಖ್ಯ ರಸ್ತೆಯಲ್ಲಿರುವ ಪಿಜಿ ವಸತಿಗೃಹದಲ್ಲಿ ವಾಸವಿರುವ ಮಹಿಳೆ ಲೋಕೇಶ್ ವಿರುದ್ಧ ಮಂಗಳವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವ್ಯಕ್ತಿ ನನ್ನ ಒಪ್ಪಿಗೆಯಿಲ್ಲದೆ ತನ್ನ ಫೇಸ್‌ಬುಕ್ ಖಾತೆಯಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಸ್ತುತ ಲೋಕೇಶ್ ನನ್ನೂ ಇನ್ನೂ ಬಂಧಿಸಲಾಗಿಲ್ಲ. ಅವರ ಸೆಕ್ಷನ್ 66ಇ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಈ ಸಕ್ಷನ್ ಅಡಿಯಲ್ಲಿ ಜಾಮೀನು ನೀಡಬಹುದಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಏಪ್ರಿಲ್ 3 ರಂದು ಬೆಳಗಿನ ಜಾವ 1.52 ಕ್ಕೆ ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1 ನೇ ಕ್ರಾಸ್‌ನಲ್ಲಿ ಈ ಘಟನೆ ನಡೆದಿತ್ತು. ಘಟನೆ ನಡೆದು ಹತ್ತು ದಿನಗಳ ನಂತರ, ಪೊಲೀಸರು ಕೇರಳದ ಕೋಝಿಕ್ಕೋಡ್ ಮೂಲದ 26 ವರ್ಷದ ಸಂತೋಷ್ ಡೇನಿಯಲ್ ಎಂಬಾತನನ್ನು ಬಂಧಿಸಿದ್ದರು.

ಕರ್ನಾಟಕ ಮತ್ತು ನೆರೆಯ ತಮಿಳುನಾಡು, ಕೇರಳದಾದ್ಯಂತ ಆರೋಪಿಯ ಚಲನವಲನಗಳನ್ನು ಪತ್ತೆಹಚ್ಚಿ, 700 ಕ್ಕೂ ಹೆಚ್ಚು ಸಿಸಿಟಿವಿಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.