ರಾಜ್ಯ

ಭಾರತದಲ್ಲಿದ್ದು ಪಾಕಿಸ್ತಾನಕ್ಕೆ ಜೈ ಎನ್ನುವವರ ಗುಂಡಿಕ್ಕಿ ಕೊಲ್ಲಿ: ವಿಶ್ವನಾಥ್

ಶತ್ರು ರಾಷ್ಟ್ರದ ಪರ ಜೈಕಾರ ಕೂಗಿದವರನ್ನು ಸುಮ್ಮನೆ ಬಿಟ್ಟು ಕಳುಹಿಸುವುದು ಸರಿಯಲ್ಲ. ನಮ್ಮ ದೇಶದ ಅನ್ನ ತಿಂದು, ನಮ್ಮ ನೀರು ಕುಡಿದು ಶತ್ರುಗಳಿಗೆ ಜೈ ಎನ್ನುವವರನ್ನು ಒಪ್ಪಲು ಸಾಧ್ಯವಿಲ್ಲ. ಈಗ ಯುದ್ಧದ ವಾತಾವರಣ ಸೃಷ್ಟಿಯಾಗಿದ್ದು, ಇಡೀ ದೇಶವೇ ಪ್ರಧಾನಿ ಮೋದಿ ಅವರ ಪರ ನಿಲ್ಲಬೇಕಾಗಿದೆ.

ಭಾರತದಲ್ಲಿದ್ದು ಪಾಕಿಸ್ತಾನಕ್ಕೆ ಜೈ ಎನ್ನುವವರ ಗುಂಡಿಕ್ಕಿ ಕೊಲ್ಲಿ: ವಿಶ್ವನಾಥ್
ಎಹೆಚ್ ವಿಶ್ವನಾಥ್
Published On :

ಮೈಸೂರು: ಭಾರತದಲ್ಲಿದ್ದುಕೊಂದು ಪಾಕಿಸ್ತಾನಕ್ಕೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಬೇಕು. ಪಾಕಿಸ್ತಾನ್ ಜಿಂದಾಬಾದ್ ಎನ್ನುವವರನ್ನು ದೇಶದ್ರೋಹಿಗಳೆಂದು ಘೋಷಿಸಿ ಶಿಕ್ಷೆ ವಿಧಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಎ.ಎಚ್. ವಿಶ್ವನಾಥ್ ಅವರು ಗುರುವಾರ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶತ್ರು ರಾಷ್ಟ್ರದ ಪರ ಜೈಕಾರ ಕೂಗಿದವರನ್ನು ಸುಮ್ಮನೆ ಬಿಟ್ಟು ಕಳುಹಿಸುವುದು ಸರಿಯಲ್ಲ. ನಮ್ಮ ದೇಶದ ಅನ್ನ ತಿಂದು, ನಮ್ಮ ನೀರು ಕುಡಿದು ಶತ್ರುಗಳಿಗೆ ಜೈ ಎನ್ನುವವರನ್ನು ಒಪ್ಪಲು ಸಾಧ್ಯವಿಲ್ಲ. ಈಗ ಯುದ್ಧದ ವಾತಾವರಣ ಸೃಷ್ಟಿಯಾಗಿದ್ದು, ಇಡೀ ದೇಶವೇ ಪ್ರಧಾನಿ ಮೋದಿ ಅವರ ಪರ ನಿಲ್ಲಬೇಕಾಗಿದೆ ಎಂದು ಹೇಳಿದರು.

ಇದೇ ವೇಳೆ ಸಾಮಾನ್ಯ ಜನಗಣತಿಯ ಜೊತೆಗೆ ಜಾತಿ ಜನಗಣತಿ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ ಅವರು, ಎಲ್ಲಾ ಸಮುದಾಯಗಳ ನಾಯಕರು ಈ ಪ್ರಯತ್ನವನ್ನು ಬೆಂಬಲಿಸುವಂತೆ ಒತ್ತಾಯಿಸಿದರು.

ಆದಾಗ್ಯೂ, ರಾಜ್ಯ ಸರ್ಕಾರದ ಸಾಮಾಜಿಕ-ಆರ್ಥಿಕ ಮತ್ತು ಶಿಕ್ಷಣ ಸಮೀಕ್ಷೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದರು, ಇದು ರಾಜಕೀಯ ಪ್ರೇರಿತವಾಗಿದ್ದು, ತಜ್ಞರ ಒಳಗೊಳ್ಳುವಿಕೆಯ ಕೊರತೆಯಿದೆ ಎಂದು ಆರೋಪಿಸಿದರು.

ಕಾಂತರಾಜ್ ಆಯೋಗದ ವರದಿಯ ಮೂಲ ವರದಿ ಇಲ್ಲದಿರುವಾಗ ಸಮೀಕ್ಷೆ ನಡೆಸಿದ್ದಾದರೂ ಹೇಗೆ? ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.