ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಪೊಲೀಸರಿಂದ ಕ್ಷಿಪ್ರ ಕಾರ್ಯಾಚರಣೆ, ಐವರು ಆರೋಪಿಗಳ ವಶ?
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಸುಹಾಸ್ ಶೆಟ್ಟಿ ಕೊಲೆ ಮಾಡಿದ್ದ ಆರೋಪಿಗಳು ಸ್ವಿಪ್ಟ್ ಕಾರಿನಲ್ಲಿ ಪರಾರಿಯಾಗಿದ್ದರು. ಕಾರನ್ನು ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ, ಹತ್ಯೆಗೆ ಬಳಸಿದ್ದ ಆಯುಧಗಳನ್ನು ಕಾರಿನಲ್ಲಿಯೇ ಬಿಸಾಡಿ ಹೋಗಿದ್ದರು. ಕೊಲೆ ಬಳಿಕ ಆರೋಪಿಗಳು ಮಂಗಳೂರಿನಲ್ಲಿಯೇ ಅವಿತು ಕುಳಿತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಆಗಾಗಲೇ ಆರೋಪಿಗಳನ್ನು ಗುರುತಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪೊಲೀಸರು ಸರ್ಕಾರಕ್ಕೆ ಮಾಹಿತಿ ನೀಡುವ ಸಾಧ್ಯತೆ ಇದೆ.
ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ತಲ್ವಾರ್ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೌಡಿಶೀಟರ್ ಸುಹಾಸ್ ಶೆಟ್ಟಿಯು ಸುರತ್ಕಲ್ನ ಫಾಜಿಲ್ ಕೊಲೆ ಕೇಸ್ನ ಪ್ರಮುಖ ಆರೋಪಿಯಾಗಿದ್ದನು. ನಿನ್ನೆಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬುವವರನ್ನು 2022ರ ಜುಲೈ 26ರಂದು ಹತ್ಯೆ ಮಾಡಿದ ಘಟನೆಯನ್ನು ನೆನಪಿಸುತ್ತದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದು, ಪ್ರಕರಣ ವಿಚಾರಣೆ ಇನ್ನೂ ನಡೆಯುತ್ತಿದೆ. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2 ದಿನ ಬಳಿಕ ಜುಲೈ 28ರಂದು ಫಾಜಿಲ್ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದನು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



