ಮಂಗಳೂರಿನಲ್ಲಿ ಇಬ್ಬರ ಮೇಲೆ ದಾಳಿ; ಕೋಮು ಉದ್ವಿಗ್ನತೆ ಬಗ್ಗೆ ಕಳವಳ
ಕುಂಟಿಕಾನ್ನಲ್ಲಿ ನಡೆದ ದಾಳಿಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಇಬ್ಬರು ಪುರುಷರ ಮೇಲೆ ಹಲ್ಲೆ ನಡೆಸಲಾಗಿದ್ದು, ಕರಾವಳಿ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ಬಗ್ಗೆ ತೀವ್ರ ಕಳವಳ ವ್ಯಕ್ತವಾಗಿದೆ.
ರೌಡಿ ಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಇದರ ನಡುವೆಯೆ ಇಂದು ಬೆಳಗ್ಗೆ ಇಬ್ಬರ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ.
ಇಂದು ನಡೆದ ಘಟನೆಗಳಿಗೂ, ರೌಡಿ ಶೀಟರ್ ಮೇಲೆ ನಡೆದ ದಾಳಿಗೂ ಇರುವ ಸಂಭಾವ್ಯ ನಂಟಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕುಂಟಿಕಾನ್ನಲ್ಲಿ ನಡೆದ ದಾಳಿಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೊದಲ ಘಟನೆಯಲ್ಲಿ, ಕುಂಟಿಕಾನ್ ಪ್ರದೇಶದ ಬಳಿ ಮೀನು ವ್ಯಾಪಾರದಲ್ಲಿ ತೊಡಗಿರುವ ಉಳ್ಳಾಲ ನಿವಾಸಿ ಲುಕ್ಮಾನ್ ಮೇಲೆ ಕಾರಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ದಾಳಿ ಮಾಡಲು ಪ್ರಯತ್ನಿಸಿದ್ದಾರೆ.
ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿದ ಲುಕ್ಮಾನ್ ಅವರನ್ನು ಅಟ್ಟಾಡಿಸಿಕೊಂಡು ಬಂದು ಅವರನ್ನು ಕೆಳಗೆ ಬೀಳಿಸಿದ ದುಷ್ಕರ್ಮಿಗಳು ಅವರ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಪ್ರಯತ್ನಿಸಿದೆ. ಅದನ್ನು ನೋಡಿದ ಮಹಿಳೆಯೊಬ್ಬರು ಕೂಗಿದ್ದರಿಂದ ಅವರು ಪಾರಾಗಿದ್ದಾರೆ.
ಲುಕ್ಮಾನ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಲ್ಲೆಗೆ ಯತ್ನಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಪ್ರಸ್ತುತ ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಮಂಗಳೂರು ನಗರದ ಹೊರವಲಯದ ಕಣ್ಣೂರಿನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ, ಮಾರುಕಟ್ಟೆಗೆ ತೆರಳುತ್ತಿದ್ದಾಗ ಮೂವರು ಅಪರಿಚಿತ ವ್ಯಕ್ತಿಗಳು ನೌಶಾದ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



