‘ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ’: ಗಾಯಕ ಸೋನು ನಿಗಮ್ ವಿರುದ್ಧ FIR ದಾಖಲು
ಈಸ್ಟ್ ಪಾಯಿಂಟ್ ಕಾಲೇಜು ಕಾರ್ಯಕ್ರಮದಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದ್ದು, ಅದು ಸಾಮಾನ್ಯ ಕೂಡ ಆಗಿತ್ತು.

ಬೆಂಗಳೂರು: ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ ಅವರು ಸೋನು ನಿಗಮ ವಿರುದ್ಧ ವಿಡಿಯೋ ಸಮೇತ ಪೊಲೀಸರಿಗೆ ದೂರು ನೀಡಿದ್ದರು.
ಕರ್ನಾಟಕ ರಕ್ಷಣಾ ವೇದಿಕೆ ಶುಕ್ರವಾರ ರಾತ್ರಿ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ಸೆಕ್ಷನ್ 352(1), 352(2), ಮತ್ತು 353 ರ ಅಡಿಯಲ್ಲಿ ಸೋನು ನಿಗಮ್ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಸೋನು ನಿಗಮ್ ಅವರು ಏಪ್ರಿಲ್ 25 ಮತ್ತು 26ರಂದು ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರ ಭಾವನೆಗಳನ್ನು ಕೆರಳಿಸುವ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯ ವಿಡಿಯೋ ದಾಖಲಾಗಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಈಸ್ಟ್ ಪಾಯಿಂಟ್ ಕಾಲೇಜು ಕಾರ್ಯಕ್ರಮದಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದ್ದು, ಅದು ಸಾಮಾನ್ಯ ಕೂಡ ಆಗಿತ್ತು.
ಆದರೆ, ಈ ವೇಳೆ ತಾಳ್ಮೆ ಕಳೆದುಕೊಂಡ ಸೋನು ನಿಗಮ್ ಅವರು, ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ ‘ಕನ್ನಡ.. ಕನ್ನಡ ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು’ ಎಂದು ಹೇಳಿದ್ದಾರೆ. ಈ ಹೇಳಿಕೆ ಇದೀಗ ಕನ್ನಡಿಗರ ಕಣ್ಣು ಕೆಂಪಗಾಗುವಂತೆ ಮಾಡಿದ್ದು, ಸೋನು ನಿಗಮ್ ಅವರ ಕುರಿತು ತೀವ್ರ ಟೀಕೆ ವ್ಯಕ್ತವಾಗುತ್ತಿರುವುದಲ್ಲದೇ, ಬ್ಯಾನ್ ಮಾಡಬೇಕೆಂಬ ಆಗ್ರಹಗಳೂ ಕೇಳಿ ಬರುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



