ರಾಜ್ಯ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಸಾಮಾಜಿಕ ಮಾಧ್ಯಮಗಳಲ್ಲಿ ಫೋಸ್ಟ್, 12 ಕೇಸ್ ದಾಖಲಿಸಿದ ಪೊಲೀಸರು!

ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತಿತರ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ಫೋಸ್ಟ್ ಗಳು ಕರಾವಳಿ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸಿವೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಸಾಮಾಜಿಕ ಮಾಧ್ಯಮಗಳಲ್ಲಿ ಫೋಸ್ಟ್, 12 ಕೇಸ್ ದಾಖಲಿಸಿದ ಪೊಲೀಸರು!
ಸುಹಾಸ್ ಶೆಟ್ಟಿ
Published On :

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಸೇಡು ತೀರಿಸಿಕೊಳ್ಳುವ ಅಥವಾ ಹತ್ಯೆಯನ್ನು ಸಂಭ್ರಮಾಚರಣೆ ಮಾಡುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಪೊಲೀಸರು 12 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಮೂಲ್ಕಿ, ಉರ್ವ, ಬರ್ಕೆ, ಮೂಡಬಿದ್ರಿ ಮತ್ತು ಕಾವೂರುನಾದ್ಯಂತ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಥಮ ಮಾಹಿತಿ ವರದಿಗಳು (FIR) ದಾಖಲಾಗಿವೆ.

ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತಿತರ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ಫೋಸ್ಟ್ ಗಳು ಕರಾವಳಿ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸಿವೆ. ಕೆಲವು ಫೋಸ್ಟ್ ಗಳಲ್ಲಿ ಸುಹಾಸ್ ಶೆಟ್ಟಿಯ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ, ನಮ್ಮ ಶಕ್ತಿಯನ್ನು ತೋರಿಸದಿದ್ದರೆ ನಾವು ಬದುಕುವುದಿಲ್ಲ, ರಕ್ತಕ್ಕೆ ರಕ್ತವೇ ಉತ್ತರ ಎಂದು ಬರೆಯಲಾಗಿದೆ.

ಇನ್ನೊಂದು ಫೋಸ್ಟ್ ನಲ್ಲಿ Finished ಎಂಬ ಪದದೊಂದಿಗೆ ಸುಹಾಸ್ ಶೆಟ್ಟಿ ಫೋಟೋ ಹಾಕಲಾಗಿದೆ. ಶೀಘ್ರದಲ್ಲೇ ಮುಂದಿನ ವಿಕೆಟ್ ಬೀಳಲಿದೆ ಎಂದು ಫೋಸ್ಟ್ ಮಾಡಲಾಗಿದೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಪೊಲೀಸರು ಯಾವುದೇ ಆಶಾಂತಿಯಾಗದಂತೆ ಮೇ 6 ರವರೆಗೆ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ನಿನ್ನೆ ಬಂದ್ ಆಚರಿಸಲಾದ ಈ ಪ್ರದೇದಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಭದ್ರತೆ ಹೆಚ್ಚಿಸಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಂಗಳೂರಿಗೆ ಶನಿವಾರ ಆಗಮಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಪಕ್ಷದ ಮುಸ್ಲಿಂ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ. ಇತ್ತೀಚಿನ ಗುಂಪು ಘರ್ಷಣೆ ಘಟನೆಗಳ ಬಗ್ಗೆ ಮುಸ್ಲಿಂ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆ ನಂತರ ಮುಸ್ಲಿಂರು ಟಾರ್ಗೆಟ್ ಆಗಿದ್ದಾರೆ. ಬಜರಂಗ ದಳದ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ, ಮೊಹಮ್ಮದ್ ಪಾಜಿಲ್ ಹತ್ಯೆಯ ಪ್ರಮುಖ ಆರೋಪಿಯಾಗಿದ್ದ. ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಯಾರು ಹತ್ಯೆಯ ಸೇಡಿನಿಂದ ಜುಲೈ 2022 ರಲ್ಲಿ ಪಾಜಿಲ್ ಹತ್ಯೆಯಾಗಿತ್ತು. ಇತ್ತೀಚಿಗೆ ಕ್ರಿಕೆಟ್ ಪಂದ್ಯದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಕೇರಳದ ಮೊಹಮ್ಮದ್ ಅಶ್ರಪ್ ಎಂಬಾತನನ್ನು ಗುಂಪೊದು ಹತ್ಯೆ ಮಾಡಿತ್ತು. ಇದಕ್ಕೂ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೂ ಸಂಬಂಧ ಇದೆಯಾ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.