ರಾಜ್ಯ

ಲಾಯರ್ ಜಗದೀಶ್ ಮೃತದೇಹ ಪತ್ತೆ: ಪೊಲೀಸರಿಂದ ತೀವ್ರ ತನಿಖೆ!

ಮೃತ ವಕೀಲ ಜಗದೀಶ ಎಚ್ ಕೆಂಗೇರಿಯ ಎಸ್‌ಎಂವಿ ಲೇಔಟ್ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.

ಲಾಯರ್ ಜಗದೀಶ್ ಮೃತದೇಹ ಪತ್ತೆ: ಪೊಲೀಸರಿಂದ ತೀವ್ರ ತನಿಖೆ!
ಮೃತ ಲಾಯರ್ ಜಗದೀಶ್
Published On :

ಬೆಂಗಳೂರು: ಬೆಂಗಳೂರಿನಲ್ಲಿ ತೀವ್ರ ಗಾಯಗಳೊಂದಿಗೆ ವಕೀಲ ಜಗದೀಶ್ ಎನ್ನುವವರ ಮೃತದೇಹ ಪತ್ತೆಯಾಗಿದೆ.

ಬೆಂಗಳೂರಿನ ಕೆಂಗೇರಿಯ ಸಿವಿ ರಾಮನ್ ಎಸ್ಟೇಟ್ ಬಳಿಯ ನೈಸ್ ರಸ್ತೆಯಲ್ಲಿ ತೀವ್ರ ಗಾಯಗಳಾಗಿರುವ 46 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ವಕೀಲ ಜಗದೀಶ್ ಎಂದು ಗುರುತಿಸಲಾಗಿದೆ. ಮೃತ ವಕೀಲ ಜಗದೀಶ ಎಚ್ ಕೆಂಗೇರಿಯ ಎಸ್‌ಎಂವಿ ಲೇಔಟ್ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 2ರಂದು ಸಂಜೆ 7.30ರಿಂದ 8 ಗಂಟೆ ಸುಮಾರಿಗೆ ಬನ್ನೇರುಘಟ್ಟ-ಕನಕಪುರ ಮಾರ್ಗದ ನೈಸ್​ ರಸ್ತೆಯಲ್ಲಿ ಜಗದೀಶ್​ ರ ಮೃತದೇಹ ಪತ್ತೆಯಾಗಿದ್ದು, ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಜಗದೀಶ್ ಬೆಂಗಳೂರಿನ ಉಲ್ಲಾಳದಲ್ಲಿ ವಾಸವಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತವೋ ಕೊಲೆಯೋ?

ಶುಕ್ರವಾರ ಜಗದೀಶ್ ಅವರು ತೆರಳುತ್ತಿದ್ದ ಕಾರಿನಿಂದ 100 ಮೀಟರ್ ದೂರದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಕಾರಿನ ಒಂದೆರಡು ಕಡೆಗಳಲ್ಲಿ ಸಣ್ಣ ಪ್ರಮಾಣದ ಅಪಘಾತವಾದ ಗುರುತುಗಳಿವೆ. ಅಪಘಾತದ ವಿಚಾರವಾಗಿ ಗಲಾಟೆ ಏನಾದರೂ ಆಗಿತ್ತಾ? ಅಥವಾ ಉದ್ದೇಶಪೂರ್ವಕವಾಗಿ ಹತ್ಯೆಗೈಯ್ಯಲಾಗಿದೆಯಾ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಸ್ತೆ ಪಕ್ಕದಲ್ಲಿ ಮೃತದೇಹ ಪತ್ತೆಯಾದ ಬಗ್ಗೆ ಶುಕ್ರವಾರ ಸಂಜೆ 7:50ರ ಸುಮಾರಿಗೆ ಪೊಲೀಸ್ ನಿಯಂತ್ರಣ ಕೋಣೆಗೆ ಕರೆ ಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ರಸ್ತೆ ಪಕ್ಕದಲ್ಲಿ ಕಾರು ನಿಂತಿದ್ದು, ಪಾರ್ಕಿಂಗ್ ಲೈಟ್ ಆನ್ ಇತ್ತು. ಕಾರಿನಿಂದ 100 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದ್ದು, ಯಾವುದೇ ಹಲ್ಲೆಯ ಗುರುತುಗಳು ಪತ್ತೆಯಾಗಿಲ್ಲ. ಕಾರಿನ ಎರಡು ಕಡೆಗಳಲ್ಲಿ ಅಪಘಾತದ ಗುರುತುಗಳಿವೆ.

ದೇಹದಲ್ಲಿ ಗಾಯದ ಗುರುತುಗಳು! ಕೊಲೆ ಆರೋಪ

ಮೃತರ ತಲೆ, ಎಡಗಾಲು ಮತ್ತು ಹೊಟ್ಟೆಯ ಮೇಲೆ ತೀವ್ರ ಗಾಯದ ಗುರುತುಗಳಿದ್ದವು. ದೂರುದಾರರು ವಕೀಲರ ಕಾರನ್ನು ಹಾನಿಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅವರನ್ನು ಕೊಲ್ಲುವ ಉದ್ದೇಶದಿಂದ ಕೆಲವು ದುಷ್ಕರ್ಮಿಗಳು ಅವರನ್ನು ಕಾರಿನಿಂದ ಕೆಳಗಿಳಿಸಿ ಆಯುಧದಿಂದ ಹೊಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಮೃತರ ಸಂಬಂಧಿಕರು ನೀಡಿರುವ ದೂರಿನನ್ವಯ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಅವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ ಎಂದು ಬೆಂಗಳೂರು ಪಶ್ಚಿಮ ವಲಯದ ಹೆಚುವರಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.