ನೆಲಮಂಗಲ: KSRTC-ಆಟೋ ನಡುವೆ ಭೀಕರ ಅಪಘಾತ; ಮೂವರು ದುರ್ಮರಣ
ವೇಗವಾಗಿ ಬಂದ KSRTC ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಶಾಂತಿನಗರ ಗ್ರಾಮದ ಬಳಿ ನಡೆದಿದೆ.

ನೆಲಮಂಗಲ: ವೇಗವಾಗಿ ಬಂದ KSRTC ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಶಾಂತಿನಗರ ಗ್ರಾಮದ ಬಳಿ ನಡೆದಿದೆ. ಮೃತರನ್ನು ಶಾಂತಿನಗರ ಗ್ರಾಮದ ಶ್ರೀನಿವಾಸ್, ಪುಟ್ಟಮ್ಮ ವರ್ಷಿಣಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಲೇಖನ ಎಂಬ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ. ನಾಗರತ್ನಮ್ಮ ಹಾಗೂ ವೆಂಕಟೇಶ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಶವಗಾರಕ್ಕೆ ರವಾನೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



