ಕಲಬುರಗಿ: ನೀಟ್ ಪರೀಕ್ಷೆ ವೇಳೆ ಜನಿವಾರ ತೆಗಿಸಿದ್ದಕ್ಕೆ ಬ್ರಾಹ್ಮಣರ ಪ್ರತಿಭಟನೆ!
ನೀಟ್ ಪರೀಕ್ಷೆ ಬರೆಯಲು ನಗರದ ಸೆಂಟ್ ಮೇರಿ ಶಾಲೆಗೆ ಬಂದಿದ್ದ ಬಸವ ಕಲ್ಯಾಣದ ಶ್ರೀಪಾದ ಪಾಟೀಲ್ ಎಂಬ ವಿದ್ಯಾರ್ಥಿಯನ್ನು ತಪಾಸಣಾ ಸಿಬ್ಬಂದಿ ತಡೆದು, ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಜನಿವಾರ ತೆಗೆಯುವಂತೆ ಸೂಚನೆ ನೀಡಿದ್ದಾರೆ.

ಕಲಬುರಗಿ: ನೀಟ್ ಪರೀಕ್ಷೆ ವೇಳೆ ವಿದ್ಯಾರ್ಥಿಯೊಬ್ಬನ ಜನಿವಾರ ತೆಗಿಸಲಾಗಿದೆ ಎಂದು ಆರೋಪಿಸಿ ಕಲಬುರಗಿಯ ಪರೀಕ್ಷಾ ಕೇಂದ್ರದ ಹೊರಗೆ ಬ್ರಾಹ್ಮಣ ಸಮುದಾಯದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು.
ನೀಟ್ ಪರೀಕ್ಷೆ ಬರೆಯಲು ನಗರದ ಸೆಂಟ್ ಮೇರಿ ಶಾಲೆಗೆ ಬಂದಿದ್ದ ಬಸವ ಕಲ್ಯಾಣದ ಶ್ರೀಪಾದ ಪಾಟೀಲ್ ಎಂಬ ವಿದ್ಯಾರ್ಥಿಯನ್ನು ತಪಾಸಣಾ ಸಿಬ್ಬಂದಿ ತಡೆದು, ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಜನಿವಾರ ತೆಗೆಯುವಂತೆ ಸೂಚನೆ ನೀಡಿದ್ದಾರೆ.
ಜನಿವಾರ ತೆಗೆಸಿದ ಘಟನೆ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಬ್ರಾಹ್ಮಣ ಸಮಾಜದ ಕೆಲ ಮುಖಂಡರು ಪರೀಕ್ಷಾ ಕೇಂದ್ರದ ಸಮೀಪ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಿವಾರ ತೆಗೆಸಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆ ವೇಳೆಯಲ್ಲೂ ಜನಿವಾರ ತೆಗೆಸಿದ ಪ್ರಕರಣ ರಾಜ್ಯಾದ್ಯಂತ ಸಾಕಷ್ಟು ಪ್ರತಿಭಟನೆಗೆ ಕಾರಣವಾಗಿತ್ತು. ಇದಾದ ನಂತರ ರಾಜ್ಯ ಸರ್ಕಾರ ಪ್ರಕರಣ ದಾಖಲು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ನಿರ್ದೇಶನ ನೀಡಿತ್ತು.
ಆದರೆ, ನೀಟ್ ಪರೀಕ್ಷೆಯಲ್ಲೂ ಇದು ಮತ್ತೆ ಮರುಕಳಿಸಿದ್ದು, ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲ. ಇದೇ ರೀತಿಯಲ್ಲಿ ಪದೇ ಪದೇ ಸಮುದಾಯವನ್ನು ಅವಮಾನಿಸುತ್ತಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



