ಫಾಜಿಲ್ ಕುಟುಂಬಕ್ಕೆ ನೀಡಿರುವ ಪರಿಹಾರಕ್ಕೂ, ಸುಹಾಸ್ ಶೆಟ್ಟಿ ಹತ್ಯೆಗೂ ಸಂಬಂಧವಿಲ್ಲ: ಸಿದ್ದರಾಮಯ್ಯ
2022ರಲ್ಲಿ, ದುಷ್ಕರ್ಮಿಗಳ ಗುಂಪೊಂದು ಸುರತ್ಕಲ್‌ನಲ್ಲಿ ಫಾಜಿಲ್ ಅವರನ್ನು ಕೊಲೆ ಮಾಡಿತ್ತು. ಈ ಕೊಲೆ ಪ್ರಕರಣದಲ್ಲಿ ರೌಡಿ ಶೀಟರ್ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದ.

ಹಾವೇರಿ: ಮೊಹಮ್ಮದ್ ಫಾಜಿಲ್ ಅವರ ಕುಟುಂಬಕ್ಕೆ ನೀಡಲಾದ ಪರಿಹಾರವನ್ನು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾಗಿರುವ ಹಂತಕರನ್ನು ನೇಮಿಸಿಕೊಳ್ಳಲು ಬಳಸಲಾಗಿದೆ ಎಂಬ ವರದಿಗಳ ಬಗ್ಗೆ ತನಗೆ ತಿಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.
ಹೆಚ್ಚಿನ ಮಾಹಿತಿ ಪಡೆಯಲು ಗೃಹ ಸಚಿವ ಪರಮೇಶ್ವರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸುವುದಾಗಿ ಹೇಳಿದರು.
2022ರಲ್ಲಿ, ದುಷ್ಕರ್ಮಿಗಳ ಗುಂಪೊಂದು ಸುರತ್ಕಲ್‌ನಲ್ಲಿ ಫಾಜಿಲ್ ಅವರನ್ನು ಕೊಲೆ ಮಾಡಿತ್ತು. ಈ ಕೊಲೆ ಪ್ರಕರಣದಲ್ಲಿ ರೌಡಿ ಶೀಟರ್ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದ.
ಇಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, 'ನಾನು ಅದರ ಬಗ್ಗೆ ಪರಿಶೀಲಿಸಬೇಕು. ನನಗೆ ಯಾವುದೇ ಮಾಹಿತಿ ಇಲ್ಲ. ನಿನ್ನೆ ದಿನೇಶ್ ಗುಂಡೂರಾವ್ ಮತ್ತು ಗೃಹ ಸಚಿವ (ಜಿ ಪರಮೇಶ್ವರ) ಅಲ್ಲಿಗೆ ಹೋಗಿದ್ದರು. ನಾನು ಇನ್ನೂ ಅವರೊಂದಿಗೆ ಮಾತನಾಡಿಲ್ಲ. ಅವರೊಂದಿಗೆ ಮಾತನಾಡಿದ ನಂತರ ಹೇಳುತ್ತೇನೆ' ಎಂದು ಹೇಳಿದರು
2022 ರಲ್ಲಿ ಫಾಜಿಲ್ ಹತ್ಯೆಯ ನಂತರ ರಾಜ್ಯ ಸರ್ಕಾರವು ಅವರ ಕುಟುಂಬಕ್ಕೆ ನೀಡಿದ 25 ಲಕ್ಷ ರೂ. ಪರಿಹಾರದಲ್ಲಿ ಐದು ಲಕ್ಷ ರೂ.ಗಳನ್ನು ಸುಹಾಸ್ ಶೆಟ್ಟಿಯನ್ನು ಕೊಲ್ಲಲು ಹಂತಕರಿಗೆ ನೀಡಲಾಗಿದೆ ಎಂದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿರುವ ಕುರಿತು ಕೇಳಲಾದ ಪ್ರಶ್ನೆಗೆ ಅವರು ಉತ್ತರಿಸಿದರು.
ಶುಕ್ರವಾರ, ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲಾಗಿದ್ದು, ಈ ಸಂಬಂಧ ಫಾಜಿಲ್ ಅವರ ಸಹೋದರ ಸೇರಿದಂತೆ ಎಂಟು ಜನರನ್ನು ಬಂಧಿಸಲಾಗಿದೆ.
ಕೋಮು ಸಮಸ್ಯೆಗಳನ್ನು ನಿಭಾಯಿಸಲು ಕಾರ್ಯಪಡೆ ರಚನೆಯ ಬಗ್ಗೆ ಕೇಳಿದಾಗ, ಸಮಾಜ ವಿರೋಧಿ ಶಕ್ತಿಗಳನ್ನು ಗುರುತಿಸಲು ಮತ್ತು ನಿಗ್ರಹಿಸಲು ಪೊಲೀಸ್ ವಿಭಾಗದ ಅಗತ್ಯವಿದೆ ಎಂದು ಪರಮೇಶ್ವರ ಹೇಳಿದ್ದಾರೆ. ನಾನು ಅದರ ಬಗ್ಗೆ ಗೃಹ ಸಚಿವರೊಂದಿಗೆ ಮಾತನಾಡುತ್ತೇನೆ ಮತ್ತು ನಂತರ ನಿಮಗೆ ತಿಳಿಸುತ್ತೇನೆ' ಎಂದು ಅವರು ಹೇಳಿದರು.
ಜಾತಿ ಗಣತಿ ನಡೆಸುವ ಕೇಂದ್ರದ ನಿರ್ಧಾರಕ್ಕೆ ಸಂಬಂಧಿಸಿದಂತೆ, ಬಿಜೆಪಿ ನಾಯಕರು ಜಾತಿ ಗಣತಿ ನಡೆಸಿದ್ದಕ್ಕಾಗಿ ತಮ್ಮನ್ನು ಟೀಕಿಸಿದರು. ಆಗ ವಿರೋಧಿಸಿದವರು ಈಗ ಕೇಂದ್ರದ ಈ ನಿರ್ಧಾರವನ್ನು ಸ್ವಾಗತಿಸುವುದಾಗಿ ಹೇಳುತ್ತಿದ್ದಾರೆ. ಪರಸ್ಪರ ಜಾತಿಗಳನ್ನು ಎತ್ತಿಕಟ್ಟುತ್ತಿದ್ದಾರೆ. ಅವರು ಜಾತಿ ಗಣತಿಯನ್ನು ವಿರೋಧಿಸಿದ್ದು ರಾಜಕೀಯ ಕಾರಣಗಳಿಗಾಗಿಯೇ ಹೊರತು ವಾಸ್ತವಿಕ ಕಾರಣಗಳಿಗಾಗಿ ಅಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಆರೋಪಿಸಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ 'ದ್ವಿಮುಖ ನೀತಿ' ಅನುಸರಿಸುತ್ತಿದೆ ಎಂಬ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರ ಆರೋಪದ ಬಗ್ಗೆ ಕೇಳಿದಾಗ, ಬಿಜೆಪಿ ಸೇರುವ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಗೌಡರು ಏನು ಹೇಳಿದ್ದರು ಮತ್ತು ಅವರು ಈಗ ಏನು ಹೇಳುತ್ತಿದ್ದಾರೆ. ಯಾರು ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ ಎಂದರೆ ಅದು ದೇವೇಗೌಡರು ಮಾತ್ರ' ಎಂದು ಅವರು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



