ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು, ಇದರಲ್ಲಿ ರಾಜಿ ಪ್ರಶ್ನೆಯೇ ಇಲ್ಲ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು, ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ಧವಿದೆ.

ಬೆಂಗಳೂರು: ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು, ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ಧವಿದೆ. ಆದರೆ, ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ.
ಶನಿವಾರ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ ವಾಹನಗಳ ಚಾಲನೆಗೆ ಹಸಿರು ನಿಶಾನೆ ಹಾಗೂ ಅನುಕಂಪ ಆಧಾರಿತ ನೇಮಕಾತಿ ಆದೇಶ ವಿತರಿಸಿ ಅವರು ಮಾತನಾಡಿದರು.
ಆರ್ಥಿಕ ಇಲಾಖೆಗೆ ಇನ್ನಷ್ಟು ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು. ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು, ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ಧವಿದೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ವೇತನ ಆಯೋಗ ಶಿಫಾರಸ್ಸು ಮಾಡಿದ ವೇತನದಲ್ಲಿ ನಯಾಪೈಸೆ ಚೌಕಾಸಿ ಮಾಡದೆ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ ಇಷ್ಟೇ ಪ್ರಮಾಣದಲ್ಲಿ ಕರ್ತವ್ಯ ನಿರೀಕ್ಷಿಸುತ್ತೇನೆ. ತೆರಿಗೆ ಸಂಗ್ರಹದಲ್ಲಿ ಗುರಿ ತಲುಪಲೇಬೇಕು. 11,495 ಕೋಟಿ ರೂಪಾಯಿ ಹದಿನೈದನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ.
ನಾವು ಗ್ಯಾರಂಟಿಗಳಿಗೆ ಹಣ ತೆಗೆದಿಟ್ಟಿದ್ದೀವಿ. ಜೊತೆಗೆ 83 ಸಾವಿರ ಕೋಟಿಯನ್ನು ಬಂಡವಾಳ ವೆಚ್ಚಕ್ಕೆ ತೆಗೆದಿರಿಸಿದ್ದೀವಿ. ಕಳೆದ ವರ್ಷ ನಾವು 52 ಸಾವಿರ ಕೋಟಿ ಬಂಡವಾಳ ವೆಚ್ಚ ಮಾಡಿದ್ದೆವು. ಈ ವರ್ಷ 31 ಸಾವಿರ ಕೋಟಿ ಹೆಚ್ಚಿನ ಬಂಡವಾಳ ವೆಚ್ಚ ಕೊಟ್ಟಿದ್ದೀವಿ. ಆದರೂ, ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ ಎಂದು ಟೀಕಿಸಿದರು.

ರಾಜ್ಯಗಳ ತೆರಿಗೆ ಪಾಲು ಕಡಿತಕ್ಕೆ ಕೇಂದ್ರ ಚಿಂತನೆ: ಅನ್ಯಾಯವಾದರೆ ಬೀದಿಗಿಳಿದು ಹೋರಾಟ; ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


