ರಾಜ್ಯ

ಸಿಎಂ ಸಚಿವಾಲಯದಲ್ಲಿನ 16 ಸಿಬ್ಬಂದಿ ಕಿತ್ತೆಸೆದ ಸಿದ್ದರಾಮಯ್ಯ ಸರ್ಕಾರ!

ಮುಖ್ಯಮಂತ್ರಿಗಳ ಸಚಿವಾಲಯದ ಸಿಬ್ಬಂದಿ ವಿರುದ್ಧ ಅನೇಕ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ, ಮೇಜರ್ ಸರ್ಜರಿ ಮಾಡಲಾಗಿದೆ.

ಸಿಎಂ ಸಚಿವಾಲಯದಲ್ಲಿನ 16 ಸಿಬ್ಬಂದಿ ಕಿತ್ತೆಸೆದ ಸಿದ್ದರಾಮಯ್ಯ ಸರ್ಕಾರ!
ಸಿದ್ದರಾಮಯ್ಯ
Published On :

ಬೆಂಗಳೂರು: ಸಿಎಂ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ 16 ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿಗಳ ಸಚಿವಾಲಯದ ಸಿಬ್ಬಂದಿ ವಿರುದ್ಧ ಅನೇಕ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ, ಮೇಜರ್ ಸರ್ಜರಿ ಮಾಡಲಾಗಿದ್ದು 16 ಸಿಬ್ಬಂದಿಗೆ ಮೂಲ ಇಲಾಖೆಗೆ ತೆರಳುವಂತೆ ಸೂಚನೆ ನೀಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಒಂಬತ್ತು ಸಿಬ್ಬಂದಿ ಮತ್ತು ಸಿಎಂ ಪರಿಹಾರ ನಿಧಿ ವಿಭಾಗದ ಏಳು ಸಿಬ್ಬಂದಿಯನ್ನು ವರ್ಗಾವಣೆಗೊಳಿಸಿ ಸಿಎಂ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಅನ್ಯಸೇವೆಯ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಮಧು ಎನ್​, ನಯನ ಕುಮಾರಿ ಬಿ.ಎಲ್​, ನವೀನ್​ ಕುಮಾರ್​, ಬಿ. ಎನ್, ಗೀತಾ ಎನ್​, ಸವಿತಾ ಟಿ.ಡಿ, ಪರಮೇಶ್​ ಹೆಚ್ ಮತ್ತು ಗಂಗಾಧರ ಎನ್​. ಆರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ತವ್ಯದಿಂದ ಬಿಡುಗಡೆಗೊಳಿಸಿದ್ದಾರೆ.

ಮುಖ್ಯಮಂತ್ರಿಗಳ ಚಿವಾಲಯದಲ್ಲಿ ಗುತ್ತಿಗೆ ಅಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಶೈಲಜಾ ಟಿ.ಎಸ್, ಶ್ರೀಶೈಲ ಸಿ. ಲಟ್ಟೆ, ರಾಮಯ್ಯ ಎನ್​, ನವೀನ್​ ಕುಮಾರ್ ಎಂ.ಆರ್​, ಅನ್ನಪೂರ್ಣ ಎಂಡಿ, ರಮ್ಯ ಜಿ, ಉಷಾ ಜಿ.ಆರ್, ಕುಮಾರಿ ಖುರ್ಷಿದ್​ ಮತ್ತು ರಿಯಾಜ್​ ಎಸ್​ ಅವರ ಗುತ್ತಿಗೆ ಆದೇಶವನ್ನು ರದ್ದುಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.