ಕಲಬುರಗಿ: ನೀಟ್ ಪರೀಕ್ಷೆ ವೇಳೆ ಜನಿವಾರ ತೆಗೆಯುವಂತೆ ಒತ್ತಾಯಿಸಿದ ಇಬ್ಬರು ಸಿಬ್ಬಂದಿ ಬಂಧನ
ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ನೀಡಿದ ದೂರಿನ ಆಧಾರದ ಮೇಲೆ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಅವರನ್ನು ಬಂಧಿಸಲಾಗಿದೆ.

ಕಲಬುರಗಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET) ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಯುವಂತೆ ಒತ್ತಾಯಿಸಿದ ಆರೋಪದ ಮೇಲೆ ಪೊಲೀಸರು ಸೋಮವಾರ ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಯನ್ನು ಬಂಧಿಸಿದ್ದಾರೆ.
ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ನೀಡಿದ ದೂರಿನ ಆಧಾರದ ಮೇಲೆ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಕಲಬುರಗಿ ಪೊಲೀಸ್ ಆಯುಕ್ತ ಎಸ್.ಡಿ. ಶರಣಪ್ಪ ಅವರು ಇಂದು ತಿಳಿಸಿದ್ದಾರೆ.
ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಸಿಬ್ಬಂದಿ ವಿರುದ್ಧ ಭಾನುವಾರ ತಡರಾತ್ರಿ ಪ್ರಕರಣ ದಾಖಲಾಗಿದೆ ಎಂದು ಶರಣಪ್ಪ ಅವರು ಹೇಳಿದ್ದಾರೆ.
ಬಂಧಿತ ಆರೋಪಿಗಳನ್ನು ಶರಣಗೌಡ ಮತ್ತು ಗಣೇಶ್ ಎಂದು ಗುರುತಿಸಲಾಗಿದೆ. ಅವರ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸರು ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ಕಾಯ್ದೆಯ ಸೆಕ್ಷನ್ 298 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಶರಣಪ್ಪ ಅವರು ತಿಳಿಸಿದ್ದಾರೆ.
ಬಂಧಿತ ಇಬ್ಬರು ಆರೋಪಿಗಳು ಖಾಸಗಿ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.
ಭಾನುವಾರ ನೀಟ್ ಪರೀಕ್ಷೆ ಬರೆಯಲು ನಗರದ ಸೆಂಟ್ ಮೇರಿ ಶಾಲೆಗೆ ಬಂದಿದ್ದ ಬಸವಕಲ್ಯಾಣದ ಶ್ರೀಪಾದ ಪಾಟೀಲ್ ಎಂಬ ವಿದ್ಯಾರ್ಥಿಯನ್ನು ತಪಾಸಣಾ ಸಿಬ್ಬಂದಿ ತಡೆದು, ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಜನಿವಾರ ತೆಗೆಯುವಂತೆ ಸೂಚನೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನು ಖಂಡಿಸಿ ಬ್ರಾಹ್ಮಣ ಸಮುದಾಯದ ಸದಸ್ಯರು ನಿನ್ನೆ ಪ್ರತಿಭಟನೆ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



