ಬೆಂಗಳೂರು: Eco World tech park ಬಳಿ ಮಹಿಳೆಗೆ ಲೈಂಗಿಕ ಕಿರುಕುಳ; ಕಾಮುಕ ಬಂಧನ
ಆರೋಪಿಯನ್ನು ದೇವರಬೀಸನಹಳ್ಳಿ ನಿವಾಸಿ ಶ್ರೀಕಾಂತ್ (32) ಎಂದು ಗುರುತಿಸಲಾಗಿದೆ, ಈತ ಎಂಬಿಎ ಪದವೀಧರನಾಗಿದ್ದು, ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆಂದು ತಿಳಿದುಬಂದಿದೆ.

ಬೆಂಗಳೂರು: ದೇವರಬೀಸನಹಳ್ಳಿಯ ಇಕೋ ವರ್ಲ್ಡ್ ಟೆಕ್ ಪಾರ್ಕ್‌ನ ಮುಖ್ಯ ದ್ವಾರದ ಬಳಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾರತ್ತಹಳ್ಳಿ ಪೊಲೀಸರು ಖಾಸಗಿ ಕಂಪನಿಯ ಉದ್ಯೋಗಿಯನ್ನು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.
ಆರೋಪಿಯನ್ನು ದೇವರಬೀಸನಹಳ್ಳಿ ನಿವಾಸಿ ಶ್ರೀಕಾಂತ್ (32) ಎಂದು ಗುರುತಿಸಲಾಗಿದೆ, ಈತ ಎಂಬಿಎ ಪದವೀಧರನಾಗಿದ್ದು, ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆಂದು ತಿಳಿದುಬಂದಿದೆ.
ಏಪ್ರಿಲ್ 30 ರಂದು ಭೋಗನಹಳ್ಳಿ ನಿವಾಸಿ 26 ವರ್ಷದ ಮಹಿಳೆಯೊಬ್ಬರು ಟೆಕ್ ಪಾರ್ಕ್‌ನ ಮುಖ್ಯ ದ್ವಾರದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿತ್ತು.
ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಶ್ರೀಕಾಂತ್ ಹಿಂದಿನಿಂದ ಬಂದು ಮಹಿಳೆಗೆ ಬೆನ್ನಿಗೆ ಕೆಳಗೆ ಹೊಡೆದಿದ್ದಾನೆ. ನಂತರ ಮುಂದೆ ಹೋಗಿ ಮತ್ತೆ ಯೂಟರ್ನ್ ತೆಗೆದುಕೊಂಡು ಮತ್ತೊಮ್ಮೆ ಮಹಿಳೆಗೆ ಕಿರುಕುಳ ನೀಡಿ, ಪರಾರಿಯಾಗಿದ್ದಾನೆ. ಈ ವೇಳೆ ಸ್ಥಳೀಯರಾರೂ ನೆರವಿಗೆ ಬರಲಿಲ್ಲ ಎಂದು ದೂರಿನಲ್ಲಿ ಮಹಿಳೆ ಹೇಳಿದ್ದರು. ದೂರ ಹಿನ್ನೆಲೆಯಲ್ಲಿ ಮಾರತಹಳ್ಳಿ ಪೊಲೀಸರು ಆರೋಪಿ ಬಂಧಿಸಲು ವಿಶೇಷ ತಂಡಗಳನ್ನು ರಚಿಸಿದ್ದರು. ಇದರಂತೆ ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಾಗಿ ಹುಡುಕಾಟ ನಡೆಸಿದ್ದ ಅಧಿಕಾರಿಗಳು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
habitual offender ಕುರಿತು ನಿರ್ಧರಿಸಲು ತನಿಖೆ ನಡೆಸಲಾಗುತ್ತಿದೆ ಎಂದು ವೈಟ್‌ಫೀಲ್ಡ್ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



