RCB vs CSK: ಐಪಿಎಲ್ ಪಂದ್ಯ ವೀಕ್ಷಣೆ ವೇಳೆ ಐಪಿಎಸ್ ಅಧಿಕಾರಿ ಮಕ್ಕಳಿಗೆ ಲೈಂಗಿಕ ಕಿರುಕುಳ, FIR ದಾಖಲು
ಘಟನೆಯಲ್ಲಿ ಭಾಗಿಯಾಗಿರುವ ಶಂಕಿತರಲ್ಲಿ ಒಬ್ಬರು ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಯಾಗಿದ್ದಾರೆ. ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದ ವೇಳೆ ಹಿರಿಯ ಐಪಿಎಸ್ ಅಧಿಕಾರಿಯ ಮಕ್ಕಳಿಗೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದ್ದು, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇ 3 ರಂದು ರಾತ್ರಿ 9.40ರ ಸುಮಾರಿಗೆ ಚಿನ್ನಸ್ವಾಮಿ ಕ್ರೀಡಾಂಗಣದ ಡೈಮಂಡ್ ಬಾಕ್ಸ್‌ನಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ದೂರುದಾರರಾದ ಐಪಿಎಸ್ ಅಧಿಕಾರಿಯ ಪತ್ನಿಯ ಪ್ರಕಾರ, ಇಬ್ಬರು ಅಪರಿಚಿತ ವ್ಯಕ್ತಿಗಳು ತಮ್ಮ ಮಗನನ್ನು (22) ನಿಂದಿಸಿದ್ದಾರೆ ಮತ್ತು ಅವರ ಮಗಳನ್ನು (26) ಅನುಚಿತವಾಗಿ ಸ್ವರ್ಶಿಸಿದ್ದಾರೆ. ಅಪರಿಚಿತರು ಜೋರಾಗಿ ಕೂಗುವ ಮೂಲಕ ಬೆದರಿಕೆ ಹಾಕಿದ್ದಾರೆ ಮತ್ತು ತಮ್ಮ ಮಕ್ಕಳಿಗೆ ತೊಂದರೆ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಅವರು ಆಕೆಯ ಮಗಳನ್ನು ಸಹ ನಿಂದಿಸಿದ್ದು, ಅವಳೊಂದಿಗೆ 'ಅಸಭ್ಯವಾಗಿ' ವರ್ತಿಸಿದ್ದಾರೆ. ದೂರುದಾರರು ಇಡೀ ಘಟನೆಯನ್ನು ತಮ್ಮ ಮಗ ತನ್ನ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ ಎಂದು ಹೇಳಿಕೊಂಡಿದ್ದಾರೆ.
ಘಟನೆಯಲ್ಲಿ ಭಾಗಿಯಾಗಿರುವ ಶಂಕಿತರಲ್ಲಿ ಒಬ್ಬರು ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಯಾಗಿದ್ದಾರೆ. ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯದ ವೇಳೆ ಈ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


