ರಾಜ್ಯ

Operation Sindoor ಎಫೆಕ್ಟ್​: ಬೆಂಗಳೂರಿನಿಂದ 5 ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳು ರದ್ದು

ವೈಮಾನಿಕ ದಾಳಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದ ವಿವಿಧೆಡೆ ವಿಮಾನ ಸಂಚಾರ ರದ್ದುಗೊಳಿಸಿದ್ದು, ಅದೇ ರೀತಿಯಾಗಿ ಬೆಂಗಳೂರಿನಿಂದ ಹಲವು ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳನ್ನು ಸಹ ರದ್ದು ಮಾಡಲಾಗಿದೆ.

Operation Sindoor ಎಫೆಕ್ಟ್​: ಬೆಂಗಳೂರಿನಿಂದ 5 ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳು ರದ್ದು
ಬೆಂಗಳೂರು ವಿಮಾನ ನಿಲ್ದಾಣ
Published On :

ಬೆಂಗಳೂರು: ಭಾರತೀಯ ಸೇನೆ ಬುಧವಾರ ಬೆಳಗಿನ ಜಾವ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ಮಾಡುವ ಮೂಲಕ ಪಹಲ್ಗಾಮ್​ನ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ.

ವೈಮಾನಿಕ ದಾಳಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದ ವಿವಿಧೆಡೆ ವಿಮಾನ ಸಂಚಾರ ರದ್ದುಗೊಳಿಸಿದ್ದು, ಅದೇ ರೀತಿಯಾಗಿ ಬೆಂಗಳೂರಿನಿಂದ ಹಲವು ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳನ್ನು ಸಹ ರದ್ದು ಮಾಡಲಾಗಿದೆ.

ಸದ್ಯ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಗುಜರಾತ್, ರಾಜಸ್ಥಾನದ ಜೋಧಪುರ್, ಉತ್ತರ ಪ್ರದೇಶದ ಅಯೋಧ್ಯೆ, ಲಖನೌ ಮತ್ತು ಘಾಜಿಯಾಬಾದ್​​ಗೆ ತೆರಳಬೇಕಿದ್ದ ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ.

ಈ ಬಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಕೆಲವು ವಾಯುಯಾನ ಪ್ರದೇಶಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಜಾರಿಯಲ್ಲಿದ್ದು, ಇದು ನಮ್ಮ ಸಂಪರ್ಕ‌ ಜಾಲದಲ್ಲಿನ ಕೆಲವು ವಿಮಾನಗಳ ಸೇವೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹೇಳಿದೆ.

ಈ ಕಾರಣ, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುನ್ನ, ತಾವು ಪ್ರಯಾಣ ಮಾಡಲಿರುವ ವಿಮಾನಗಳ ವೇಳಾಪಟ್ಟಿಗಳ ಕುರಿತು ಆಯಾ ವಿಮಾನಯಾನ ಸಂಸ್ಥೆಗಳ ಜೊತೆಗೆ ಸಂಪರ್ಕಿಸಿ ಪರಿಶೀಲಿಸಲು ವಿನಂತಿಸಲಾಗಿದೆ.

ಪ್ರಯಾಣಿಕರು ತಮ್ಮ ವಿಮಾನಗಳ ವೇಳಾಪಟ್ಟಿಯಲ್ಲಿನ ಬದಲಾವಣೆಗಳನ್ನು ಆಯಾ ವಿಮಾನಯಾನ ಸಂಸ್ಥೆಗಳ ಅಧಿಕೃತ ಎಕ್ಸ್ ಖಾತೆಗಳ ಮೂಲಕ ಪಡೆಯಬಹುದಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.