ರಾಜ್ಯ

Operation Sindoor: ಭಾರತೀಯ ಸೇನೆ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಮುಜರಾಯಿ ಇಲಾಖೆ ಆದೇಶ

ರಾಜ್ಯ ಸರ್ಕಾರ ಸಹ ಭಾರತೀಯ ಸೇನೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ.

Operation Sindoor: ಭಾರತೀಯ ಸೇನೆ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಮುಜರಾಯಿ ಇಲಾಖೆ ಆದೇಶ
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
Published On :

ಬೆಂಗಳೂರು: ಭಾರತೀಯ ಸೇನೆ 'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ 9 ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ಪಹಲ್ಗಾಮ್​ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ.

ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆಗೆ ದೇಶದಾದ್ಯಂತ ಅಭಿನಂದಿಸಲಾಗುತ್ತಿದೆ. ರಾಜ್ಯ ಸರ್ಕಾರ ಸಹ ಭಾರತೀಯ ಸೇನೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಆಪರೇಷನ್ ಸಿಂಧೂರ್ ಭಾಗವಾಗಿ ಎಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲು ಸೂಚನೆ ನೀಡಿದ್ದಾರೆ. ಹೀಗಾಗಿ ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲು ಧಾರ್ಮಿಕ ‌ದತ್ತಿ‌ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಭಾರತೀಯ ಸೈನ್ಯದ ಕಾರ್ಯಾಚರಣೆ ಬಗ್ಗೆ ನಮಗೆ ಯಾವಾಗಲೂ ಹೆಮ್ಮೆ ಇದೆ. ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ಜವಾಹರ್​ ಲಾಲ್​ ನೆಹರು ಅವರ ಅವಧಿಯಲ್ಲಿ ಪಾಕಿಸ್ತಾನ ಮತ್ತು ಚೀನಾ ವಿರದ್ಧ ನಡೆದ ಯುದ್ದದಲ್ಲೂ ಕೂಡ ನಮ್ಮ ಸೇನೆ ಹೀಗೆ ಕಾರ್ಯಾಚರಣೆ ನಡೆಸಿದೆ. ಪುಲ್ವಾಮಾ ಘಟನೆ ಆದಾಗಲೇ ಇದನ್ನ ಮಾಡಬೇಕಿತ್ತು. ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು.

ಸರ್ಕಾರಿ ಆದೇಶ
ಸರ್ಕಾರಿ ಆದೇಶ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.