ರಾಜ್ಯ

'Operation Sindoor': ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಪ್ರಯಾಣಿಕನನ್ನು ಕೆಳಗಿಳಿಸಿದ ಏರ್ ಇಂಡಿಯಾ!

ಇಂದು ಸಂಜೆ 6.05 ಕ್ಕೆ ವಿಮಾನ ಹೊರಡುವ ಮೊದಲು, ಭದ್ರತಾ ಸಂಬಂಧಿತ ಕಾರಣಗಳಿಂದಾಗಿ ಗುರುತು ಬಹಿರಂಗಪಡಿಸದ ಪ್ರಯಾಣಿಕನನ್ನು ಆಫ್‌ಲೋಡ್ ಮಾಡಲಾಯಿತು ಎಂದು ಅವರು ಹೇಳಿದ್ದಾರೆ.

'Operation Sindoor': ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಪ್ರಯಾಣಿಕನನ್ನು ಕೆಳಗಿಳಿಸಿದ ಏರ್ ಇಂಡಿಯಾ!
ಏರ್ ಇಂಡಿಯಾ
Published On :

ಬೆಂಗಳೂರು: ದೇಶಾದ್ಯಂತ ಬಿಗಿ ಭದ್ರತೆಯ ನಡುವೆ, ಬುಧವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಕೆಐಎ) ಏರ್ ಇಂಡಿಯಾ ವಿಮಾನದಿಂದ ಒಬ್ಬ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಪ್ರಯಾಣಿಕನು ಬೆಂಗಳೂರಿನಿಂದ ನವದೆಹಲಿಗೆ AI-2820 ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು

ಇಂದು ಸಂಜೆ 6.05 ಕ್ಕೆ ವಿಮಾನ ಹೊರಡುವ ಮೊದಲು, ಭದ್ರತಾ ಸಂಬಂಧಿತ ಕಾರಣಗಳಿಂದಾಗಿ ಗುರುತು ಬಹಿರಂಗಪಡಿಸದ ಪ್ರಯಾಣಿಕನನ್ನು ಆಫ್‌ಲೋಡ್ ಮಾಡಲಾಯಿತು ಎಂದು ಅವರು ಹೇಳಿದ್ದಾರೆ.

ಈ ಘಟನೆಯನ್ನು ಖಚಿತಪಡಿಸಿದ ಏರ್ ಇಂಡಿಯಾ ಅಧಿಕಾರಿಯೊಬ್ಬರು, "ನಮಗೆ ಘಟನೆಯ ಬಗ್ಗೆ ಮಾಹಿತಿ ಇದೆ. ಆದರೆ ಯಾವುದೇ ವಿವರಗಳನ್ನು ಹಂಚಿಕೊಳ್ಳುವುದಿಲ್ಲ." "ಪ್ರಯಾಣಿಕನನ್ನು ಕೆಳಗಿಳಿಸಲು ಒಂದು ಕಾರಣವಿರುತ್ತದೆ ಮತ್ತು ಇದು ನಿಯಮಿತವಾಗಿ ಮಾಡುವ ಕೆಲಸವಲ್ಲ. ನಿರ್ದಿಷ್ಟ ಕಾರಣಗಳಿದ್ದವು, ಅದನ್ನು ನಾವು ಬಹಿರಂಗಪಡಿಸುವ ಸ್ಥಿತಿಯಲ್ಲಿಲ್ಲ" ಎಂದು ತಿಳಿಸಿದ್ದಾರೆ.

ಭಾರತೀಯ ಸೇನೆ 'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಇಂದು ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ 9 ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ಪಹಲ್ಗಾಮ್​ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ. 'ಆಪರೇಷನ್ ಸಿಂಧೂರ್' ನಂತರ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.