ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ
ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಮಾಹಿತಿ ನೀಡಿದ್ದು, ವಿಧಾನಸಭೆಯ ಸಂಖ್ಯಾಬಲ 223 ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು: ಸಿಬಿಐ ಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಮಾಹಿತಿ ನೀಡಿದ್ದು, ವಿಧಾನಸಭೆಯ ಸಂಖ್ಯಾಬಲ 223 ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.
ಜನಪರತಿನಿಧಿಗಳ ಕಾಯ್ದೆಯಡಿ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳ ಸದಸ್ಯತ್ವ ರದ್ದಾಗಲಿದೆ. ಜನಾರ್ದನ ರೆಡ್ಡಿ ಅವರು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ ನಂತರವೂ 6 ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ.

ಅಕ್ರಮ ಗಣಿಗಾರಿಕೆ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ; ಸಿಬಿಐ ವಿಶೇಷ ಕೋರ್ಟ್ ತೀರ್ಪು
ಓಬಳಾಪುರಂ ಮೈನಿಂಗ್ ಕಂಪನಿ(ಒಎಂಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ನೀಡಿತ್ತು.
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಬರೋಬ್ಬರಿ 13 ವರ್ಷಗಳಿಂದ ನಡೆದ ಸುದೀರ್ಘ ವಿಚಾರಣಾ ಪ್ರಕ್ರಿಯೆಯಲ್ಲಿ 3,400ಕ್ಕೂ ಹೆಚ್ಚು ದಾಖಲೆಗಳನ್ನು ಪರಿಶೀಲಿಸಲಾಗಿದೆ ಮತ್ತು 219 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


