ರಾಜ್ಯ

ಆಪರೇಷನ್ ಸಿಂಧೂರ: ಮೇ 9 ಶುಕ್ರವಾರ ರಾಜ್ಯದ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ

ನಾಳೆ ಶುಕ್ರವಾರ ಮಸೀದಿಗಳಲ್ಲಿ ಮುಸಲ್ಮಾನರೆಲ್ಲರೂ ಸೇರಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಭಾರತೀಯ ಸೈನಿಕರಿಗೆ ಕೃತಜ್ಞತೆ, ಧೈರ್ಯ ಹಾಗೂ ಶಕ್ತಿ ತುಂಬಲು ಮಸೀದಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಆಪರೇಷನ್ ಸಿಂಧೂರ: ಮೇ 9 ಶುಕ್ರವಾರ ರಾಜ್ಯದ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ
Published On :

ಬೆಂಗಳೂರು: ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ದೇಶದ ಮೂರು ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ ಸಚಿವ ಬಿ ಝಡ್ ಜಮೀರ್ ಅಹ್ಮದ್ ತಿಳಿಸಿದ್ದಾರೆ.

ನಾಳೆ ಶುಕ್ರವಾರ ಮಸೀದಿಗಳಲ್ಲಿ ಮುಸಲ್ಮಾನರೆಲ್ಲರೂ ಸೇರಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಭಾರತೀಯ ಸೈನಿಕರಿಗೆ ಕೃತಜ್ಞತೆ, ಧೈರ್ಯ ಹಾಗೂ ಶಕ್ತಿ ತುಂಬಲು ಮಸೀದಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚೆಗೆ ಸಚಿವ ಜಮೀರ್ ಅಹ್ಮದ್ ಪಾಕಿಸ್ತಾನ ವಿರುದ್ಧ ಯುದ್ಧ ಮಾಡುವುದಾದರೆ ನಾನು ಸೂಸೈಡ್ ಸೂಟ್ ತೊಟ್ಟು ಹೋಗಲು ಸಿದ್ಧನಿದ್ದೇನೆ ಎಂದು ಹೇಳಿ ಟ್ರೋಲ್ ಆಗಿದ್ದರು.

Story image

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.