ರಾಜ್ಯ

ಸೈನಿಕರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ದೂರು

ಚಕ್ರವರ್ತಿ ಸೂಲಿಬೆಲೆ ಪ್ರತಿ ಬಾರಿಯೂ ಸಹ ಹಿಂದೂ ಮುಸ್ಲಿಂ ಹಾಗೂ ಭಾರತ- ಪಾಕಿಸ್ತಾನ ಹೆಸರಿನಲ್ಲಿ ತನ್ನ ಪ್ರಚಾರವನ್ನು ಗಿಟ್ಟಿಸಿಕೊಳ್ಳಲು ಸುಳ್ಳಿನ ಮಾಹಿತಿಯನ್ನು ಹರಿಬಿಡುತ್ತಾರೆ.

ಸೈನಿಕರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ದೂರು
ಚಕ್ರವರ್ತಿ ಸೂಲಿಬೆಲೆ
Published On :

ಬೆಂಗಳೂರು: ಯುವ ಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರು ಭಾರತೀಯ ಸೈನಿಕರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಹೇಳಿಕೆ ನೀಡುತ್ತಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಅಪ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪಾಕಿಸ್ತಾನದ ಉಗ್ರರ ಅಡಗು ತಾಣಗಳನ್ನು ಭಾರತೀಯ ಸೇನೆ ಧ್ವಂಸ ಮಾಡಿದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ಪ್ರಚಾರ ಪಡೆಯುವ ಸೂಲಿಬೆಲೆ ಚಕ್ರವರ್ತ,ಭಾರತದ ಸೈನಿಕರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕೂಡಲೇ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು, ಕೂಡಲೇ ಬಂಧಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಪ್ರತಿ ಬಾರಿಯೂ ಸಹ ಹಿಂದೂ ಮುಸ್ಲಿಂ ಹಾಗೂ ಭಾರತ- ಪಾಕಿಸ್ತಾನ ಹೆಸರಿನಲ್ಲಿ ತನ್ನ ಪ್ರಚಾರವನ್ನು ಗಿಟ್ಟಿಸಿಕೊಳ್ಳಲು ಸುಳ್ಳಿನ ಮಾಹಿತಿಯನ್ನು ಹರಿಬಿಡುತ್ತಾರೆ. ಸುಳ್ಳನ ಪ್ರಚಾರ ಮಾಡಿ ಸತ್ಯದ ರೀತಿ ಬಿಂಬಿಸುವುದು ಅವರ ಒಂದಂಶದ ಕಾರ್ಯಕ್ರಮವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪಾಕಿಸ್ತಾನ ಬೆಂಗಳೂರು ನಗರದ ಮೇಲೂ ದಾಳಿ ನಡೆಸುವ ಸಂಭವ ಇದೆ ಎಂಬ ಹೇಳಿಕೆ ನೀಡುವ ಮೂಲಕ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದು, ಕಾಂಗ್ರೆಸ್ ಪಕ್ಷ ಪಾಕಿಸ್ತಾನವನ್ನು ಬೆಂಬಲಿಸುತ್ತಿದೆ ಎಂಬ ಆರೋಪ ಹಾಗೂ ಆಧಾರ ರಹಿತ ಹೇಳಿಕೆ ನೀಡಿ ಜನರಿಗೆ ತಪ್ಪು ಸಂದೇಶ ರವಾನಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಚಕ್ರವರ್ತಿ ಸೂಲಿಬೆಲೆ ಅವರನ್ನು ಬಂಧಿಸಿ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.