ಮರಕ್ಕೆ ಕಾರು ಡಿಕ್ಕಿ: ಓರ್ವ ಯುವಕ ಸಾವು, ನಾಲ್ವರಿಗೆ ಗಾಯ
ಕಬ್ಬಾಳಿ ನಲ್ಲಿ ಶನಿವಾರ ಹುಟ್ಟುಹಬ್ಬ ಆಚರಿಸಿಕೊಂಡು ಅಲ್ಲಿಂದ ವಾಪಸ್ ಬೆಂಗಳೂರಿಗೆ ತೆರಳುವ ವೇಳೆ ಭಾನುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಕನ್ನಿದೊಡ್ಡಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಗುದ್ದಿದೆ.

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯ ಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಅಕ್ಕೂರು ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಪಟ್ಟಣ ರಸ್ತೆಯ ಬಳಿ ಭಾನುವಾರ ನಡೆದಿದೆ.
ಮೃತ ಯುವಕನನ್ನು ಹೆಬ್ಬಾಳದ ನಿವಾಸಿ ಮೋಹನ್ (21) ಎಂದು ಗುರ್ತಿಸಲಾಗಿದೆ. ಮಂಜುನಾಥ, ಚಾಲಕ ಪುನೀತ್, ಸಂಗಮೇಶ ಮತ್ತು ಮನೋಹರ್ ಗಾಯಾಳುಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಬ್ಬಾಳಿ ನಲ್ಲಿ ಶನಿವಾರ ಹುಟ್ಟುಹಬ್ಬ ಆಚರಿಸಿಕೊಂಡು ಅಲ್ಲಿಂದ ವಾಪಸ್ ಬೆಂಗಳೂರಿಗೆ ತೆರಳುವ ವೇಳೆ ಭಾನುವಾರ ಬೆಳಗ್ಗೆ 7 ಗಂಟೆಗೆ ತಾಲೂಕಿನ ಕನ್ನಿದೊಡ್ಡಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಗುದ್ದಿದೆ.
ಅಪಘಾತದ ರಭಸಕ್ಕೆ ಚಾಲಕ ಮೋಹನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ನಂತರ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮಾನ್ ಆಸ್ಪತ್ರೆಗೆ ಸಾಗಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



