ಚಾಮರಾಜನಗರ ಶಾಸಕ ಪುಟ್ಟರಂಗ ಶೆಟ್ಟಿಗೆ ಪುತ್ರವಿಯೋಗ: ಹಿರಿಯ ಮಗ ಚಾಮರಾಜ್ ನಿಧನ
ಪಿ.ಚಾಮರಾಜ್(42) ಪುಟ್ಟರಂಗಶೆಟ್ಟಿ ಅವರ ಹಿರಿಯ ಮಗನಾಗಿದ್ದು ಇವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದರು.

ಚಾಮರಾಜನಗರ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಅವರ ಹಿರಿಯ ಪುತ್ರ ಚಾಮರಾಜ್ ಸೋಮವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಪಿ.ಚಾಮರಾಜ್(42) ಪುಟ್ಟರಂಗಶೆಟ್ಟಿ ಅವರ ಹಿರಿಮಗನಾಗಿದ್ದು ಇವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದರು. ಮಧುಮೇಹದಿಂದ ಬಳಲುತ್ತಿದ್ದ ಚಾಮರಾಜ್ ಕಳೆದ ಒಂದೂವರೆ ತಿಂಗಳಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಹಲವು ದಿನಗಳಿಂದ ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಿಸದೇ ಪಿ. ಚಾಮರಾಜ್ ಅಸುನೀಗಿದ್ದಾರೆ. ಶಾಸಕ ಸಿ.ಪುಟ್ಟರಂಗಶೆಟ್ಟಿ ಮತ್ತು ವೆಂಕಟಮ್ಮ ದಂಪತಿಯ ಹಿರಿ ಪುತ್ರನಾಗಿರುವ ಚಾಮರಾಜ್ ಓರ್ವ ಸಹೋದರ, ಇಬ್ಬರು ಸಹೋದರಿಯರು, ಪತ್ನಿ , ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಸ್ವಗ್ರಾಮ ಉಪ್ಪಿನಮೋಳೆಗೆ ಪಾರ್ಥೀವ ಶರೀರ ತರಲಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ ಉಪ್ಪಿನಮೋಳೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


