ರಾಜ್ಯ

ರಾಮನಗರ: ಬಿಡದಿ ಬಳಿ ಮೂಕ ಬಾಲಕಿ ಕೊಲೆ, ರೈಲ್ವೆ ಹಳಿ ಪಕ್ಕ ಶವ ಪತ್ತೆ!

ಮಾತು ಬಾರದ, ಕಿವಿ ಕೇಳಿಸದ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಮನಗರ: ಬಿಡದಿ ಬಳಿ ಮೂಕ ಬಾಲಕಿ ಕೊಲೆ, ರೈಲ್ವೆ ಹಳಿ ಪಕ್ಕ ಶವ ಪತ್ತೆ!
ಪೋಷಕರಿಗೆ ಸಾಂತ್ವನ ಹೇಳಿದ ಡಿಕೆ ಶಿವಕುಮಾರ್
Published On :

ರಾಮನಗರ: ಬಿಡದಿ ಸಮೀಪ ಮೂಕ ಬಾಲಕಿ ಕೊಲೆಯಾಗಿದೆ. ಭಾನುವಾರ ಸಂಜೆಯೇ ಕಣ್ಮರೆಯಾಗಿದ್ದು ಬಾಲಕಿ, ಸೋಮವಾರ ಬೆಳಗ್ಗೆ ಭದ್ರಾಪುರ ಗ್ರಾಮದ ಬಳಿಯಿರುವ ರೈಲ್ವೆ ಹಳಿಯ ಪಕ್ಕದ ಹಳ್ಳದಲ್ಲಿ ಶವ ಪತ್ತೆಯಾಗಿತ್ತು.

ಮಾತು ಬಾರದ, ಕಿವಿ ಕೇಳಿಸದ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈದ್ಯಕೀಯ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆಯೇ ಎಂಬುವುದು ಗೊತ್ತಾಗಲಿದೆ ಎಂದು ರಾಮನಗರ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

ಕೊಲೆ ಹಂತಕರನ್ನು ಬಂಧಿಸುವವರೆಗೂ ಬಾಲಕಿಯ ಅಂತ್ಯ ಸಂಸ್ಕಾರ ಮಾಡಲ್ಲ ಎಂದು ಪೋಷಕರು ಪ್ರತಿಭಟನೆ ನಡೆಸಿದರು. ಬಳಿಕ ಅಧಿಕಾರಿಗಳು ಪೋಷಕರನ್ನು ಸಮಾಧಾನ ಪಡಿಸಿ ಬುಧವಾರ ಸಂಜೆ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಬಾಲಕಿ ಹತ್ಯೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪೋಷಕರಿಗೆ ಸಾಂತ್ವಾನ ಹೇಳಿ 5 ಲಕ್ಷ ರೂ. ಪರಿಹಾರದ ಚೆಕ್‌ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ಯಾರೇ ಇರಲಿ ಕ್ರಮವಹಿಸಬೇಕು. ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ಮಾಡಲಿ ಎಂದು ಹೇಳಿದರು.

ರಾಜ್ಯದಲ್ಲಿ ಹೆಚ್ಚುತ್ತಿರುವ ಇಂತಹ ಪ್ರಕರಣಗಳು "ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಸೂಚಿಸುತ್ತದೆ ಎಂದು ಜೆಡಿಎಸ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆರೋಪಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.