3 ತಿಂಗಳಲ್ಲಿ ಗುತ್ತಿಗೆದಾರರ 32,000 ಕೋಟಿ ರೂ ಬಾಕಿ ಬಿಲ್ ಪಾವತಿ: DCM ಡಿ.ಕೆ ಶಿವಕುಮಾರ್ ಭರವಸೆ
ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಡಿಸಿಎಂಗೆ ವಿವರಿಸಿದ್ದೇವೆ. ಸಣ್ಣ ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಬಿಡುಗಡೆ ಮಾಡಿ ತೆರವುಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ.

ಬೆಂಗಳೂರು: ಸರ್ಕಾರದಿಂದ ಗುತ್ತಿಗೆದಾರರಿಗೆ ಬಾಕಿ ಇರುವ, 32,000 ಕೋಟಿ ರೂಪಾಯಿಯನ್ನು ಮುಂದಿನ ಎರಡು-ಮೂರು ತಿಂಗಳಲ್ಲಿ ಪಾವತಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಭರವಸೆ ನೀಡಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ (KSCA) ಜೊತೆ ಮಂಗಳವಾರ ಸರ್ಕಾರಿ ನಿವಾಸದಲ್ಲಿ ಸಭೆ ನಡೆಸಿದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ ಮಂಜುನಾಥ್, ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಡಿಸಿಎಂಗೆ ವಿವರಿಸಿದ್ದೇವೆ. ಸಣ್ಣ ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಬಿಡುಗಡೆ ಮಾಡಿ ತೆರವುಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದರು.
ಸಣ್ಣ ಗುತ್ತಿಗೆದಾರರಲ್ಲಿ ಹಿರಿತನದ ಆಧಾರದ ಮೇಲೆ ಬಾಕಿ ಪಾವತಿಸುವುದಾಗಿ ಡಿಸಿಎಂ ಭರವಸೆ ನೀಡಿದ್ದಾರೆ. ಬಿಲ್‌ಗಳನ್ನು ತೆರವುಗೊಳಿಸುವಾಗ ಅಧಿಕಾರಿಗಳು ಮಾಡುವ ತಪ್ಪುಗಳು ಸಿಎಂ ಅಥವಾ ಸಚಿವರಿಗೆ ತಿಳಿದಿಲ್ಲ. ನಾವು ಇದನ್ನು ಉಪಮುಖ್ಯಮಂತ್ರಿಗಳಿಗೆ ವಿವರಿಸಿದ್ದೇವೆ. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಬಾಕಿ ಬಿಲ್‌ಗಳನ್ನು ತೆರವುಗೊಳಿಸುವುದಾಗಿ ಶಿವಕುಮಾರ್ ಅವರು ಭರವಸೆ ನೀಡಿದ್ದಾರೆಂದು ತಿಳಿಸಿದರು.
ಈ ಸಭೆ ಫಲಪ್ರದವಾಗಿದೆ. ಯಾವುದೇ ಸಮಸ್ಯೆ ಇದ್ದರೆ ತಮ್ಮನ್ನು ಸಂಪರ್ಕಿಸುವಂತೆ ಉಪ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ಅಧಿಕಾರಿಗಳು ಮಾಡಿದ ತಪ್ಪುಗಳು ಶಿವಕುಮಾರ್ ಅವರಿಗೆ ತಿಳಿದಿದೆ. ಇದನ್ನು ಸರಿಪಡಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ಸಣ್ಣ ಗುತ್ತಿಗೆದಾರರಿಗೆ ಪರಿಹಾರ ಸಿಗಬೇಕೆಂದು ನಾವು ಬಯಸುತ್ತೇವೆಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



