ಬೆಳಗಾವಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಅಪ್ರಾಪ್ತರ ಬಂಧನ
ಘಟನೆ ಮೇ 6ರಂದು ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಘಟನೆ ಸಂಬಂಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ: ಬೆಳಗಾವಿಯ ನಾನಾವಾಡಿಯಲ್ಲಿ 14 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಬಾಲಕಿಯನ್ನು ಪುಸಲಾಯಿಸಿ, ನಗರದ ಹೊರವಲಯದ ಪ್ರದೇಶಕ್ಕೆ ಕರೆದೊಯ್ದಿರುವ ಬಾಲಕರು, ಪಾರ್ಟಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆ ಮೇ 6ರಂದು ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಘಟನೆ ಸಂಬಂಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಇದರ ಬೆನ್ನಲ್ಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಇದೀಗ ಇಬ್ಬರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಮತ್ತೋರ್ವನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಪೊಲೀಸ್ ಆಯುಕ್ತ ಇಯಾಡಾ ಮಾರ್ಟಿನ್ ಮಾರ್ಬ್ನ್ಯಾಂಗ್ ಅವರು ಮಾತನಾಡಿ, ಪ್ರಮುಖ ಆರೋಪಿ ಅಪ್ರಾಪ್ತ ವಯಸ್ಕನನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ. ಬಾಲಕಿಗೆ ನ್ಯಾಯ ಒದಗಿಸಲು ಸಮಗ್ರ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



