Karnataka govt: ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ!
2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದಂತೆ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹ ಧನ ನೀಡುವುದರ ಮೂಲಕ ರೂ. ಗೌರವ ಧನವನ್ನು ರೂ. 1,000 ಹೆಚ್ಚಿಸಲಾಗುವುದು ಎಂದಿದ್ದಾರೆ.

ಬೆಂಗಳೂರು: ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ರೂ.1,000 ಹೆಚ್ಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ಆಶಾ ಕಾರ್ಯಕರ್ತೆಯರ ಗೌರವ ಧನ ಏರಿಸಿದ್ದಾರೆ.
ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದಂತೆ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹ ಧನ ನೀಡುವುದರ ಮೂಲಕ ರೂ. ಗೌರವ ಧನವನ್ನು ರೂ. 1,000 ಹೆಚ್ಚಿಸಲಾಗುವುದು ಎಂದಿದ್ದಾರೆ.
ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಗುರುತಿಸಿ, ಆಯ್ಕೆ ಮಾಡಲಾಗಿದ್ದು, ಅವರ ಗ್ರಾಮ ಅಥವಾ ಪ್ರದೇಶ ವ್ಯಾಪ್ತಿಯಲ್ಲಿ ಸಮುದಾಯ ಆರೋಗ್ಯ ಸ್ಥಿತಿ ಸುಧಾರಣೆಗೆ ಶ್ರಮಿಸುತ್ತಿದ್ದಾರೆ.
ಆರೋಗ್ಯ ಸಿಬ್ಬಂದಿ ಗೌರವ ಧನವೂ ಏರಿಕೆ: ಇನ್ನು ಇದರ ಜೊತೆಗೆ ಆರೋಗ್ಯ ಸಿಬ್ಬಂದಿಗಳ ಗೌರವ ಧನವೂ ಏರಿಕೆ ಮಾಡಿ ಸರ್ಕಾರ ಆದೇಶಿಸಿದೆ. ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಗೌರವ ಧನ 1500 ರೂಪಾಯಿಗೆ ಏರಿಕೆ ಮಾಡಿ ಸರ್ಕಾರ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



