ಇಂದಿರಾ ಕ್ಯಾಂಟೀನ್ನಲ್ಲಿ 7 ಕೋಟಿ ರೂ ಅವ್ಯವಹಾರ: BBMP ಉಪ ಆರೋಗ್ಯಾಧಿಕಾರಿ ಅಮಾನತು
ಚೆಫ್ಟಾಕ್ ಫುಡ್ ಅಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಬಿಲ್ ಪಾವತಿಯಲ್ಲಿ 7 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ನಡೆದಿದೆ ಎಂದು ಬಿಬಿಎಂಪಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು: ದಕ್ಷಿಣ ವಲಯದ ಇಂದಿರಾ ಕ್ಯಾಂಟೀನ್ನಲ್ಲಿ ಸುಮಾರು 7 ಕೋಟಿ ರೂ.ಗಳ ಅವ್ಯವಹಾರ ನಡೆಸಿದ್ದಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಲಯದ ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಪಿ. ಅವರನ್ನು ಅಮಾನತುಗೊಳಿಸಲಾಗಿದೆ.
ಪಾಲಿಕೆಯ ದಕ್ಷಿಣ ವಲಯಕ್ಕೆ ಆಹಾರ ಪೂರೈಕ ಮಾಡಿದ ಚೆಫ್ಟಾಕ್ ಫುಡ್ ಅಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಬಿಲ್ ಪಾವತಿಯಲ್ಲಿ 7 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ನಡೆದಿದೆ ಎಂದು ಬಿಬಿಎಂಪಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಆರೋಗ್ಯಾಧಿಕಾರಿಯಾಗಿದ್ದ ಡಾ.ಕಲ್ಪನಾ ಪಿ ಅವರು ಆರ್ಡರ್ ಗಳನ್ನು ಪರಿಶೀಲಿಸದೆ ಅಂದಾಜು ರೂ. 9.72 ಕೋಟಿ ಪಾವತಿಸಿದ್ದಾರೆ. ಆದರೆ ಅದಕ್ಕೆ ವಾಸ್ತವವಾಗಿ ಪಾವತಿಸಬೇಕಾದದ್ದು ಕೇವಲ ರೂ. 2.27 ಕೋಟಿ ಮಾತ್ರ,. ಇದರಿಂದ ಹೆಚ್ಚುವರಿಯಾಗಿ ಸುಮಾರು 7 ಕೋಟಿ ರೂ. ಪಾವತಿಸಿದ್ದಕ್ಕಾಗಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಇದೀಗ ಮೊತ್ತದ ವಸೂಲಾತಿಗೆ ನೋಟಿಸ್ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಾಲಿಕೆ ಆಡಳಿತ ಈ ಪ್ರಕರಣದ ಕೂಲಂಕಷ ತನಿಖೆ ನಡೆಸುತ್ತಿದೆ. ಹೆಚ್ಚುವರಿ ಜವಾಬ್ದಾರಿಯನ್ನು ಮತ್ತೊಬ್ಬ ಅಧಿಕಾರಿಗೆ ವಹಿಸಲಾಗಿದೆ.
ಜೊತೆಗೆ ಡಾ.ಸುರೇಶ್ ಜಿ.ಕೆ. ಅವರಿಗೆ ದಕ್ಷಿಣ ವಲಯದ ಹೆಚ್ಚುವರಿ ಆರೋಗ್ಯಾಧಿಕಾರಿ ಜವಾಬ್ದಾರಿ ನೀಡಲಾಗಿದೆ. ಅವರು ಪ್ರಸ್ತುತ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಉಪ ಆರೋಗ್ಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



