ಸಕಲೇಶಪುರ-ಸುಬ್ರಹ್ಮಣ್ಯ ವಿದ್ಯುದ್ದೀಕರಣ ಕಾಮಗಾರಿ: ಜೂನ್ 1ರಿಂದ ಮಂಗಳೂರು-ಬೆಂಗಳೂರು ಹಗಲು ರೈಲುಗಳು ರದ್ದು
ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ.

ಬೆಂಗಳೂರು: ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಸೆಕ್ಷನ್ ಮಧ್ಯೆ ರೈಲು ಮಾರ್ಗದ ವಿದ್ಯುದ್ದೀಕರಣ (ಆರ್‌ಇ) ಕಾಮಗಾರಿ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ನಡುವೆ ಜೂ.1ರಿಂದ ನ.1ರ ವರೆಗೆ ಸುಮಾರು 154 ದಿನಗಳ ಕಾಲ ಹಗಲು ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ನೈರುತ್ಯ ರೈಲ್ವೆಯ ಪ್ರಕಟಣೆ ತಿಳಿಸಿದೆ.
ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ. ಅದೇ ರೀತಿ, ಜೂನ್ 1 ರಿಂದ ನವೆಂಬರ್ 2 ರವರೆಗೆ ಪ್ರತಿ ಭಾನುವಾರದಂದು ಸಂಚರಿಸುವ ಮಂಗಳೂರು ಜಂಕ್ಷನ್ ಟು ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) ಸಂಚಾರ ರದ್ದಾಗಲಿದೆ.
ಇದಲ್ಲದೆ, ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಯಶವಂತಪುರ ಟು ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16515) ಹಾಗೂ ಜೂನ್ 3ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಂಚರಿಸುವ ಕಾರವಾರ ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನು ಸಹ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮಾಹಿತಿ ತಿಳಿಸಿದೆ.
ಗೊಮ್ಮಟೇಶ್ವರ ಎಕ್ಸ್‌ಪ್ರೆಸ್, ಕಾರವಾರ ಎಕ್ಸ್‌ಪ್ರೆಸ್, ಮಂಗಳೂರು ಸೆಂಟ್ರಲ್ ವಾರದ ವಿಶೇಷ ಎಕ್ಸ್‌ಪ್ರೆಸ್ ಮುಂದಿನ 5 ತಿಂಗಳು ರದ್ದಾಗಲಿವೆ. ಬೆಂಗಳೂರಿನಿಂದ ಕರಾವಳಿ ಭಾಗಕ್ಕೆ ಸಂಚಾರ ನಡೆಸುವ 12 ರೈಲುಗಳ ಪೈಕಿ 6 ರೈಲುಗಳು ಸಂಪೂರ್ಣ ರದ್ದಾಗುತ್ತಿವೆ. ಈ ಮೂಲಕ ಪ್ರಯಾಣಿಕರು ಬದಲಿ ಮಾರ್ಗ ಆಯ್ದುಕೊಳ್ಳಬೇಕಾದ ಅನಿವಾರ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


