ಸಾರ್ವಜನಿಕ ಸಾರಿಗೆ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬೆಂಬಲ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
ಕೇಂದ್ರ ಪ್ರಾಯೋಜಿತ ಪಿಎಂ ಇ-ಡ್ರೈವ್ ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಹೆಚ್ಚು ಪ್ರಮಾಣದಲ್ಲಿ ವಿದ್ಯುತ್ ಚಾಲಿತ ಬಸ್ಸುಗಳನ್ನು ಹಂಚಿಕೆ ಮಾಡಬೇಕು ಎಂದು ರಾಜ್ಯದ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ನವದೆಹಲಿಯ ಕುಮಾರಸ್ವಾಮಿಯವರ ಸಚಿವಾಲಯಕ್ಕೆ ಭೇಟಿ ನೀಡಿ ಪ್ರಸ್ತಾವನೆ ಸಲ್ಲಿಸಿದರು.

ಬೆಂಗಳೂರು: ರಾಜ್ಯದ ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಹೆಚ್ಚಿಸಲು ಸರ್ಕಾರ ಕೈಗೊಂಡಿರುವ ಕ್ರಮಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಶುಕ್ರವಾರ ಭರವಸೆ ನೀಡಿದರು,
ಕೇಂದ್ರ ಪ್ರಾಯೋಜಿತ ಪಿಎಂ ಇ-ಡ್ರೈವ್ ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಹೆಚ್ಚು ಪ್ರಮಾಣದಲ್ಲಿ ವಿದ್ಯುತ್ ಚಾಲಿತ ಬಸ್ಸುಗಳನ್ನು ಹಂಚಿಕೆ ಮಾಡಬೇಕು ಎಂದು ರಾಜ್ಯದ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ನವದೆಹಲಿಯ ಕುಮಾರಸ್ವಾಮಿಯವರ ಸಚಿವಾಲಯಕ್ಕೆ ಭೇಟಿ ನೀಡಿ ಪ್ರಸ್ತಾವನೆ ಸಲ್ಲಿಸಿದರು.
ಈ ವೇಳೆ ರಾಮಲಿಂಗಾ ರೆಡ್ಡಿಯವರು ಕುಮಾರಸ್ವಾಮಿ ಅವರೊಂದಿಗೆ ರಾಜ್ಯದ ನಗರ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಮಾತುಕತೆ ನಡೆಸಿದರು.
ಈ ವೇಳೆ ಕರ್ನಾಟಕ ಸರಕಾರಕ್ಕೆ ಕೇಂದ್ರದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ ಸಚಿವ ಕುಮಾರಸ್ವಾಮಿ ಅವರು, ವಿದ್ಯುತ್ ಚಾಲಿತ ಬಸ್ಸುಗಳ ಹಂಚಿಕೆ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ ಮತ್ತು ಕರ್ನಾಟಕಕ್ಕೆ ಹಂತಹಂತವಾಗಿ ಮತ್ತು ಆದ್ಯತೆಯ ಮೇರೆಗೆ ವಿದ್ಯುತ್ ಚಾಲಿತ ಬಸ್ಸುಗಳನ್ನು ಹಂಚಿಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಪಿಎಂ ಇ–ಡ್ರೈವ್ ಉಪಕ್ರಮದಡಿ 9 ಪ್ರಮುಖ ನಗರಗಳಿಗೆ 14,000 ವಿದ್ಯುತ್ ಚಾಲಿತ ಬಸ್‌ಗಳನ್ನು ಹಂಚಿಕೆ ಮಾಡಲಾಗುವುದು. ಚಾರ್ಜಿಂಗ್ ಸ್ಟೇಷನ್, ಬಸ್ ಡಿಪೊಗಳು ಮತ್ತು ವಾಹನ ನಿರ್ವಹಣಾ ವ್ಯವಸ್ಥೆ ಸೇರಿ ಸಂಬಂಧಿತ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಚರ್ಚಿಸಿವೆ. ಈ ಯೋಜನೆಯ ತ್ವರಿತ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಸಚಿವಾಲಯದ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.
ಪಿಎಂ ಇ-ಡ್ರೈವ್ ಉಪಕ್ರಮವು 14,028 ವಿದ್ಯುತ್ ಚಾಲಿತ ಬಸ್‌ಗಳೊಂದಿಗೆ ನಗರಗಳಲ್ಲಿ ವಾಯುಮಾಲಿನ್ಯ ರಹಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ಗುರಿ ಹೊಂದಿದೆ. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ಎರಡು ವರ್ಷಗಳ ಅವಧಿಯಲ್ಲಿ ರೂ.10,900 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



