ರಾಜ್ಯ

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರ ಬಂದ್'ಗೆ ರಾಜ್ಯ ಸರ್ಕಾರ ಆದೇಶ

ಸರಕಾರಿ ಆಸ್ಪತ್ರೆಗಳ ಹೊರಗೆ ಜನೌಷಧಿ ಕೇಂದ್ರಗಳ ಸ್ಥಾಪನೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬಾರದ ಕಾರಣ ಅವು ಮುಂದುವರೆಯಬಹುದಾಗಿದೆ.

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರ ಬಂದ್'ಗೆ ರಾಜ್ಯ ಸರ್ಕಾರ ಆದೇಶ
ಸಂಗ್ರಹ ಚಿತ್ರ
Published On :

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶ್ರೀಪತಿ ಪಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.

ಸರಕಾರಿ ಆಸ್ಪತ್ರೆಗಳ ಹೊರಗೆ ಜನೌಷಧಿ ಕೇಂದ್ರಗಳ ಸ್ಥಾಪನೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬಾರದ ಕಾರಣ ಅವು ಮುಂದುವರೆಯ ಬಹುದಾಗಿದೆ. ಆರೋಗ್ಯ ಇಲಾಖೆಯ ಸರಕಾರಿ ಆಸ್ಪತ್ರೆಗಳಲ್ಲಿ ಅಸ್ತಿತ್ವದಲ್ಲಿರುವ ಜನೌಷಧಿ ಕೇಂದ್ರಗಳನ್ನು ಅವರೊಂದಿಗೆ ಮಾಡಿಕೊಂಡಿರುವ ಒಪ್ಪಂದ ನಿಯಮಗಳ ಪ್ರಕಾರ ಸ್ಥಗಿತಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಹಾಗೆಯೇ, ಜೆನೆರಿಕ್ ಔಷಧಿಗಳ ಖರೀದಿಗೆ ಬಿಪಿಪಿಐಯೊಂದಿಗೆ ಕೆಎಸ್‍ಎಂಎಸ್‍ಸಿಎಲ್ ರವರು ವಿಶೇಷ ದರಗಳನ್ನು ರೂಪಿಸಲು ಸೂಚಿಸಿದೆ. ಪರ್ಯಾಯವಾಗಿ ಆಸ್ಪತ್ರೆಗಳು ಬಿಪಿಪಿಐ ಯಿಂದ ಔಷಧಿಗಳನ್ನು ಖರೀದಿಸಿ ರೋಗಿಗಳಿಗೆ ಉಚಿತವಾಗಿ ವಿತರಿಸಲು ಕ್ರಮ ವಹಿಸುವಂತೆ ತಿಳಿಸಿದ್ದಾರೆ.

ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ಯಾವುದೇ ಔಷಧಿಗಳನ್ನು ಹೊರಗಿನಿಂದ ಖರೀದಿಸಲು ಶಿಫಾರಸ್ಸು ಮಾಡದಂತೆ ನೋಡಿಕೊಳ್ಳುವುದು ಸರಕಾರದ ನೀತಿಯಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದೊಳಗೆ ಜನೌಷಧಿ ಕೇಂದ್ರಗಳನ್ನು ತೆರೆಯುವುದು ಸರಕಾರದ ನೀತಿಗೆ ವ್ಯತಿರಿಕ್ತವಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸಲ್ಲಿಸಿರುವ ಪ್ರಸ್ತಾವನೆ ಮತ್ತು ಲಭ್ಯವಿರುವ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರಕಾರವು ಈ ಆದೇಶವನ್ನು ಹೊರಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.