ಬೆಂಗಳೂರು ಮಳೆ ಅವಾಂತರ: ಈ ಸಮಸ್ಯೆ ಹೊಸದಲ್ಲ, ನಿಮ್ಮೊಂದಿಗೆ ನಿಲ್ಲುತ್ತೇನೆ; ಡಿ.ಕೆ ಶಿವಕುಮಾರ್
ಇಂದು ನಾವು ಎದುರಿಸುತ್ತಿರುವ ಸಮಸ್ಯೆಗಳು ಹೊಸದೇನಲ್ಲ. ಹಲವು ಸರ್ಕಾರಗಳ, ಹಲವು ವರ್ಷಗಳ ನಿರ್ಲಕ್ಷ್ಯತನದಿಂದ ಈ ಸಮಸ್ಯೆ ಎದುರಿಸುತ್ತಿದ್ದೇವೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ತತ್ತರಿಸಿದ್ದು, ಸಾರ್ವಜನಿಕರು ಬಿಬಿಎಂಪಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.
ಈ ನಡುವಲ್ಲೇ ಪರಿಸ್ಥಿತಿ ಕುರಿತು ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಕೆ.ಶಿವಕುಮಾರ್ ಅವರು, ನಿಮ್ಮಲ್ಲಿ ನಾನೂ ಒಬ್ಬ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಉಂಟಾದ ಹಾನಿಯಿಂದ ತೀವ್ರ ಕಳವಳಗೊಂಡಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಾನು ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಸವಾಲುಗಳನ್ನು ಎದುರಿಸಲು ಮತ್ತು ಪರಿಹಾರವನ್ನು ಕೈಗೊಳ್ಳುವ ದಿನದ 24 ಗಂಟೆಗಳೂ ನಾನು ಕೆಲಸ ಮಾಡುತ್ತಿದ್ದೇನೆಂದು ಹೇಳಿದ್ದಾರೆ.
ನಾನು ಬಿಬಿಎಂಪಿ ವಾರ್ ರೂಮ್ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ ವಾಸ್ತವಿಕ ಮಾಹಿತಿ ಪಡೆಯುತ್ತೇನೆ. ಇವತ್ತು ನಾವು ಎದುರಿಸುತ್ತಿರುವ ಸಮಸ್ಯೆಗಳು ಹೊಸದೇನಲ್ಲ. ಹಲವು ಸರ್ಕಾರಗಳ, ಹಲವು ವರ್ಷಗಳ ನಿರ್ಲಕ್ಷ್ಯತನದಿಂದ ಈ ಸಮಸ್ಯೆ ಎದುರಿಸುತ್ತಿದ್ದೇವೆ. ಈ ಸಮಸ್ಯೆ ಪರಿಹರಿಸಲು ಕೆಲಸ ಮಾಡಲಾಗುತ್ತಿದೆ. ತಾತ್ಕಾಲಿಕ ಪರಿಹಾರವಲ್ಲದೆ, ದೀರ್ಘಕಾಲಿಕ ಪರಿಹಾರ ಕೈಗೊಳ್ಳು ಕೆಲಸ ಮಾಡುತ್ತಿದ್ದೇವೆಂದು ತಿಳಿಸಿದ್ದಾರೆ.
ಬೆಂಗಳೂರಿಗರೇ, ನಾನು ನಿಮ್ಮಲ್ಲಿ ಒಬ್ಬ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ. ನಿಮ್ಮ ಕಳವಳ ಅರ್ಥಮಾಡಿಕೊಳ್ಳುತ್ತೇನೆ. ಹತಾಶೆಯನ್ನು ಹಂಚಿಕೊಳ್ಳುತ್ತೇನೆ. ಬೆಂಗಳೂರಿನ ಈ ಸಮಸ್ಯೆಯನ್ನು ಪರಿಹರಿಸಲು ನಾನು ಬದ್ಧನಾಗಿದ್ದು, ಈ ಬಗ್ಗೆ ನಾನು ಭರವಸೆ ನೀಡುತ್ತೇನೆ. ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ ಎಂದಿದ್ದಾರೆ.

Bengaluru ಭಾರೀ ಮಳೆ: ಸಾಯಿ ಲೇಔಟ್ ಜಲಾವೃತ; BBMP ವಿರುದ್ಧ ಸ್ಥಳೀಯರ ಆಕ್ರೋಶ, ಆಯುಕ್ತರಿಂದ ಶಾಶ್ವತ ಪರಿಹಾರದ ಭರವಸೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


