ರಾಜ್ಯ

"ಕುತ್ತಿಗೆ, ಬೆನ್ನು ನೋವಿಗೆ ನೀವೇ ಕಾರಣ": BBMPಗೆ ಬೆಂಗಳೂರು ನಿವಾಸಿಯಿಂದ ನೊಟೀಸ್; 50 ಲಕ್ಷ ರೂ ಪರಿಹಾರಕ್ಕೆ ಆಗ್ರಹ!

ಡಾ. ದಿವ್ಯಾ ಕಿರಣ್ ಬಿಬಿಎಂಪಿಗೆ ನೊಟೀಸ್ ಜಾರಿಗೊಳಿಸಿದ್ದು, ಸಾರ್ವಜನಿಕ ರಸ್ತೆಗಳನ್ನು ನಿರ್ವಹಿಸದ ಕಾರಣ ಉಂಟಾದ ದೈಹಿಕ ನೋವನ್ನು, ಭಾವನಾತ್ಮಕ ಮತ್ತು ಆರ್ಥಿಕ ಹೊರೆಯನ್ನು ಅನುಭವಿಸಿದ್ದಕ್ಕಾಗಿ ₹50 ಲಕ್ಷ ಪರಿಹಾರವನ್ನು ಕೇಳಿದ್ದಾರೆ.

"ಕುತ್ತಿಗೆ, ಬೆನ್ನು ನೋವಿಗೆ ನೀವೇ ಕಾರಣ": BBMPಗೆ ಬೆಂಗಳೂರು ನಿವಾಸಿಯಿಂದ ನೊಟೀಸ್; 50 ಲಕ್ಷ ರೂ ಪರಿಹಾರಕ್ಕೆ ಆಗ್ರಹ!
ಬಿಬಿಎಂಪಿ ಕಚೇರಿ — online desk
Published On :

ಬೆಂಗಳೂರು: ಬೆಂಗಳೂರಿನ ನಿವಾಸಿಯೊಬ್ಬರು ಬಿಬಿಎಂಪಿ ಕಾನೂನು ನೋಟಿಸ್ ಜಾರಿ ಮಾಡಿದ್ದು, ಪಾಲಿಕೆ ಸಾರ್ವಜನಿಕ ಕರ್ತವ್ಯವನ್ನು ನಿರ್ವಹಿಸುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ಮತ್ತು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಡಾ. ದಿವ್ಯಾ ಕಿರಣ್ ಬಿಬಿಎಂಪಿಗೆ ನೊಟೀಸ್ ಜಾರಿಗೊಳಿಸಿದ್ದು, ಸಾರ್ವಜನಿಕ ರಸ್ತೆಗಳನ್ನು ನಿರ್ವಹಿಸದ ಕಾರಣ ಉಂಟಾದ ದೈಹಿಕ ನೋವನ್ನು, ಭಾವನಾತ್ಮಕ ಮತ್ತು ಆರ್ಥಿಕ ಹೊರೆಯನ್ನು ಅನುಭವಿಸಿದ್ದಕ್ಕಾಗಿ ₹50 ಲಕ್ಷ ಪರಿಹಾರವನ್ನು ಕೇಳಿದ್ದಾರೆ.

ನೋಟಿಸ್‌ನಲ್ಲಿರುವ ವಿವರಗಳ ಪ್ರಕಾರ, ಕಿರಣ್ ಕುತ್ತಿಗೆ ಮತ್ತು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ, ಇದು ಬೆಂಗಳೂರಿನ ರಸ್ತೆಗಳಲ್ಲಿ ಪ್ರಯಾಣಿಸುವಾಗ ಉಂಟಾದ ಸೆಳೆತ ಮತ್ತು ಆಘಾತದಿಂದ ಉಂಟಾಗಿರುವ ಸಮಸ್ಯೆಯಾಗಿದೆ.

ರಿಚ್ಮಂಡ್ ಟೌನ್ ನಿವಾಸಿ ಕಿರಣ್ ಪರವಾಗಿ ವಕೀಲ ಕೆ.ವಿ. ಲವೀನ್ ಕಾನೂನು ನೋಟಿಸ್ ಕಳುಹಿಸಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿರುವ ರಸ್ತೆಗಳ ಕಳಪೆ ಸ್ಥಿತಿಯಿಂದಾಗಿ ಅವರು ಅನುಭವಿಸಿದ ತೀವ್ರ ನೋವು, ಆಘಾತ ಮತ್ತು ಯಾತನೆಯಿಂದಾಗಿ ಈ ಕಾನೂನು ನೋಟಿಸ್ ಕಳುಹಿಸಬೇಕಾಯಿತು ಎಂದು ಹೇಳಿದ್ದಾರೆ. ಆಳವಾದ ಗುಂಡಿಗಳು, ಮುರಿದುಹೋದ ಮತ್ತು ಅಸಮವಾದ ಮಾರ್ಗಗಳು ಮತ್ತು ಚಲಿಸಲು ಯೋಗ್ಯವಲ್ಲದ ರಸ್ತೆಗಳೇ ಕಿರಣ್ ಗೆ ಆರೋಗ್ಯ ಸಮಸ್ಯೆ ಉದ್ಭವಿಸಿದೆ ಎಂದು ನೊಟೀಸ್ ನಲ್ಲಿ ಆರೋಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.