ರಾಜ್ಯದ 4 ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ
ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3,695 ಆನೆಗಳು ನಮ್ಮಲ್ಲಿವೆ. ಮಾನವ - ಆನೆ ಸಂಘರ್ಷ ತಡೆಗಟ್ಟಲು ಅಕ್ಕಪಕ್ಕದ ರಾಜ್ಯಗಳ ಸಹಕಾರವೂ ಅಗತ್ಯ.

ಬೆಂಗಳೂರು: ನೆರೆಯ ರಾಜ್ಯ ಆಂಧ್ರಪ್ರದೇಶಕ್ಕೆ ರಾಜ್ಯದಿಂದ ನಾಲ್ಕು ಕುಮ್ಕಿ ಆನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹಸ್ತಾಂತರಿಸಿದ್ದಾರೆ.
ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್ ಅವರಿಗೆ ಆನೆಗಳನ್ನು ಹಸ್ತಾಂತರ ಮಾಡಿದರು. ಈ ವೇಳೆ ರಾಜ್ಯದಿಂದ ಆಂಧ್ರಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3,695 ಆನೆಗಳು ನಮ್ಮಲ್ಲಿವೆ. ಮಾನವ - ಆನೆ ಸಂಘರ್ಷ ತಡೆಗಟ್ಟಲು ಅಕ್ಕಪಕ್ಕದ ರಾಜ್ಯಗಳ ಸಹಕಾರವೂ ಅಗತ್ಯ. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಹಾಜರಿದ್ದರು.
ಪ್ರಸ್ತುತ ಆಂಧ್ರಪ್ರದೇಶಕ್ಕೆ ರಾಜ್ಯ ಸರ್ಕಾರ ನಾಲ್ಕು ಆನೆಗಳನ್ನು ಹಸ್ತಾಂತರಿಸಿದ್ದು, ಮುಂದಿನ ದಿನಗಳಲ್ಲಿ ಮತ್ತೆರಡು ಆನೆಗಳನ್ನು ಹಸ್ತಾಂತರಿಸಲಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



