ರಾಜ್ಯದ ಪ್ರಭಾರ ಡಿಜಿ-ಐಜಿಪಿಯಾಗಿ ಕನ್ನಡಿಗ ಎಂ.ಎ. ಸಲೀಂ ನೇಮಕ
ಸೇವಾ ಹಿರಿತನ ಆಧಾರದ ಮೇಲೆ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಪ್ರಭಾರ ಡಿಜಿ-ಐಜಿಪಿಯಾಗಿ ನೇಮಕ ಮಾಡಲಾಗಿದೆ.

ಬೆಂಗಳೂರು: ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ, ಬೆಂಗಳೂರಿನ ಚಿಕ್ಕಬಾಣಾವರದ ಕನ್ನಡಿಗ ಎಂ.ಎ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಕಳೆದ ಏಪ್ರಿಲ್ 30 ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಮೇ 21ರ ವರೆಗೆ ವಿಸ್ತರಣೆ ಮಾಡಲಾಗಿತ್ತು.
ಇಂದು ಅಲೋಕ್ ಮೋಹನ್ ಅವರಿಂದ ತೆರವಾದ ಸ್ಥಾನಕ್ಕೆ, ಸೇವಾ ಹಿರಿತನ ಆಧಾರದ ಮೇಲೆ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಪ್ರಭಾರ ಡಿಜಿ-ಐಜಿಪಿಯಾಗಿ ನೇಮಕ ಮಾಡಲಾಗಿದೆ.

1966ರ ಜೂನ್ 25ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಸಲೀಂ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನುಪಡೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



